ʼಛತ್ರಪತಿ ಶಿವಾಜಿʼಯಾಗಿ ರಿಷಬ್ ಶೆಟ್ಟಿ, ಫಸ್ಟ್ ಲುಕ್ ಬಿಡುಗಡೆ

Views: 105
ಕನ್ನಡ ಕರಾವಳಿ ಸುದ್ದಿ: ಕನ್ನಡ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಅವರು ಇದೀಗ ದಕ್ಷಿಣ ಭಾರತದಲ್ಲಿ ಬಹು ಬೇಡಿಕೆಯ ನಟ. ಕನ್ನಡದಿಂದ ಈ ನಟ ಇದೀಗ ತೆಲುಗು ಸೇರಿದಂತೆ ದಕ್ಷಿಣ ಭಾರತದಾದ್ಯಂತ ಬಹುಬೇಡಿಕೆಯ ನಟರಾಗಿದ್ದಾರೆ. ಕಾಂತಾರ ಸಿನಿಮಾದ ನಂತರ ಇವರ ಕ್ರೇಜ್ ಸಿಕ್ಕಾಪಟ್ಟೆ ಜಾಸ್ತಿಯಾಗಿದೆ. ತೆಲುಗು ಭಾಷೆಯಲ್ಲಿ ರಿಷಬ್ ಅವರ ಹನುಮಾನ್ ಸಿನಿಮಾ ಘೋಷಣೆಯಾಗಿದೆ. ಈ ಸಿನಿಮಾ ಈಗಾಗಲೇ ಭಾರೀ ಸದ್ದು ಮಾಡ್ತಿದೆ. ಇದರ ಹಿಂದೆಯೇ ಅವರ ಮತ್ತೊಂದು ಸಿನಿಮಾ ಘೋಷಣೆಯಾಗಿದೆ. ಈ ಸಿನಿಮಾ ಹಲವು ಕಾರಣಗಳಿಗೆ ಅಚ್ಚರಿ ಮೂಡಿಸಿದೆ.
ರಿಷಬ್ ಶೆಟ್ಟಿ ಅವರ ಸಿನಿಮಾ ದೇಶದಾದ್ಯಂತ ಭಾರೀ ಸದ್ದು ಮಾಡಿತ್ತು. ಕರ್ನಾಟಕದಲ್ಲಿ ಹಾಗೂ ಕನ್ನಡ ಚಿತ್ರರಂಗದಲ್ಲಿ ಹೊಸ ದಾಖಲೆಯನ್ನೇ ಈ ಸಿನಿಮಾ ಸೃಷ್ಟಿ ಮಾಡಿತ್ತು. ಇದೀಗ ರಿಷಬ್ ಶೆಟ್ಟಿ ಅವರ ನೂತನ ದಿ ಪ್ರೈಡ್ ಆಫ್ ಭಾರತ್ ಛತ್ರಪತಿ ಶಿವಾಜಿ ಮಹಾರಾಜ್ ಸಿನಿಮಾ ಘೋಷಣೆಯಾಗಿದ್ದು, ಪೋಸ್ಟರ್ ಸಹ ಬಿಡುಗಡೆಯಾಗಿದೆ.
ಇನ್ನು ಈ ಸಿನಿಮಾವನ್ನು ನಿರ್ದೇಶಕ ಸಂದೀಪ್ ಸಿಂಗ್ ಅವರು ನಿರ್ದೇಶನ ಮಾಡುತ್ತಿದ್ದು, ಇದು ಅವರ ಮೊಟ್ಟ ಮೊದಲ ಸಿನಿಮಾ ಆಗಿದೆ. ಛತ್ರಪತಿ ಶಿವಾಜಿ ಮಹಾರಾಜ್ ಸಿನಿಮಾವು ಆರು ಭಾಷೆಗಳಲ್ಲಿ ತೆರೆ ಕಾಣಲಿದೆ. ಹಿಂದಿ, ಮರಾಠಿ, ಕನ್ನಡ, ತೆಲುಗು ಹಾಗೂ ತಮಿಳು ಸೇರಿದಂತೆ ಆರು ಭಾಷೆಗಳಲ್ಲಿ ಈ ಸಿನಿಮಾ ಬಿಡುಗಡೆಯಾಗಲಿದೆ. 2027ರ ಜನವರಿಯ 21ಕ್ಕೆ ವಿಶ್ವದಾದ್ಯಂತ ಈ ಸಿನಿಮಾ ಬಿಡುಗಡೆಯಾಗಲಿದೆ ಎಂದು ಚಿತ್ರತಂಡ ಹೇಳಿದೆ.