ಇತರೆ

ಅಂಕಲ್‌ನಿಂದ ಲವ್‌ ಟಾರ್ಚರ್‌ ಪ್ಯಾರಾ ಮೆಡಿಕಲ್ ವಿದ್ಯಾರ್ಥಿನಿ ಆತ್ಮಹತ್ಯೆ

Views: 168

ಕನ್ನಡ ಕರಾವಳಿ ಸುದ್ದಿ: 42ರ ಅಂಕಲ್‌ ಪ್ರೀತಿಯ  ಕಿರುಕುಳಕ್ಕೆ ಬೇಸತ್ತು ವಿದ್ಯಾರ್ಥಿನಿ ಪಿನಾಯಿಲ್ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಬೆಟಗೇರಿ ಬಾಲಕಿಯರ ಹಾಸ್ಟೆಲ್‌ನಲ್ಲಿ ನಡೆದಿದೆ.

ಜಿಲ್ಲೆಯ ಮುಂಡರಗಿ ತಾಲೂಕಿನ ವಿರಪಾಪೂರ ತಾಂಡಾದ ನಿವಾಸಿ ವಂದನಾ (19)ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ.

ವಂದನಾ ಗದಗದ ಜಿಮ್ಸ್ ಕಾಲೇಜಿನಲ್ಲಿ ಪ್ಯಾರಾ ಮೆಡಿಕಲ್ ವ್ಯಾಸಂಗ ಮಾಡುತ್ತಿದ್ದಳು. ಸಮಾಜ ಕಲ್ಯಾಣ ಇಲಾಖೆ ಬೆಟಗೇರಿ ಡಾ.ಬಿ.ಆರ್ ಅಂಬೇಡ್ಕರ್ ಸರ್ಕಾರಿ ಮೆಟ್ರಿಕ್ ನಂತರದ ವೃತ್ತಿಪರ ಬಾಲಕಿಯರ ಹಾಸ್ಟೆಲ್ ನಲ್ಲಿದ್ದಕೊಂಡೇ ವ್ಯಾಸಂಗ ಮಾಡುತ್ತಿದ್ದಳು.

ಗುರುವಾರ ಹಾಸ್ಟೆಲ್‌ನಲ್ಲಿ ಪಿನಾಯಿಲ್ ಸೇವಿಸಿದ್ದಾಳೆ, ಕೂಡಲೇ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಸಾವನ್ನಪ್ಪಿದ್ದಾಳೆ.

19 ವರ್ಷದ ವಂದನಾಗೆ ಅದೇ ಗ್ರಾಮದ 42 ವರ್ಷದ ಕಿರಣ್ ಕಾರಬಾರಿ ಎಂಬಾತ ಪ್ರೀತಿಸು, ಮದುವೆಯಾಗು ಅಂತ ಒತ್ತಾಯಿಸುತ್ತಿದ್ದ. ಪ್ರತಿದಿನ ಫೋನ್ ಮಾಡಿ ಕಿರುಕುಳ ನೀಡುತ್ತಿದ್ದ. ಮದುವೆ ಆಗದಿದ್ದರೆ ಫೋಟೋ ಎಡಿಟ್ ಮಾಡಿ ಸೊಷಿಯಲ್ ಮೀಡಿಯಾಗೆ ಹಾಕುವುದಾಗಿ ಹೆದರಿಸಿದ್ದ. ಇದರಿಂದ ಮನನೊಂದ ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ವಂದನಾ ಪೋಷಕರು ಆರೋಪಿಸಿದ್ದಾರೆ.

ಆರೋಪಿಗೆ ತಕ್ಕ ಶಿಕ್ಷೆ ಆಗಬೇಕೆಂದು ಕುಟುಂಬಸ್ಥರ ಆಗ್ರಹವಾಗಿದೆ.ಆರೋಪಿ ಕಿರಣ್ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಈ ಕುರಿತು ಗದಗ ಬೆಟಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related Articles

Back to top button