ಸಾಮಾಜಿಕ

ಅಜೆಕಾರು ಪತ್ನಿ ಪ್ರಿಯಕರನ ಜೊತೆ ಸೇರಿ ಪತಿಯನ್ನೇ ಕೊಲೆಗೈದ ಪ್ರಕರಣದ ಆರೋಪಿಗೆ ಜಾಮೀನು ನಿರಾಕರಣೆ

Views: 191

ಕನ್ನಡ ಕರಾವಳಿ ಸುದ್ದಿ: ಕಾರ್ಕಳ, ಅಜೆಕಾರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪತ್ನಿ ಪ್ರಿಯಕರನ ಜೊತೆ ಸೇರಿ ತನ್ನ ಪತಿಯನ್ನೇ ಕೊಲೆಗೈದ ಪ್ರಕರಣದ ಆರೋಪಿ ದಿಲೀಪ್ ಹೆಗ್ಡೆ(28) ಜಾಮೀನು ಅರ್ಜಿಯನ್ನು ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಉಡುಪಿ ಸಂಚಾರಿ ಪೀಠ ಕಾರ್ಕಳ ತಿರಸ್ಕರಿಸಿ ಆದೇಶ ನೀಡಿದೆ.

ನ್ಯಾಯಾಂಗ ಬಂಧನದಲ್ಲಿರುವ ದಿಲೀಪ್ ಹೆಗ್ಡೆ ಸಲ್ಲಿಸಿರುವ ಜಾಮೀನು ಅರ್ಜಿಗೆ ಸರಕಾರಿ ಅಭಿಯೋಜಕ ಪ್ರಕಾಶ್‌ಚಂದ್ರ ಶೆಟ್ಟಿ ಆಕ್ಷೇಪಣೆ ಸಲ್ಲಿಸಿದ್ದರು. ವಾದ ಪ್ರತಿವಾದವನ್ನು ಆಲಿಸಿದ ನ್ಯಾಯಾಧೀಶ ಸಮಿವುಲ್ಲಾ, ಚಾರ್ಜ್‌ಶೀಟ್ ನಲ್ಲಿರುವ ಅಂಶಗಳನ್ನು ಪರಿಗಣಿಸಿ ಆರೋಪಿಯ ಅರ್ಜಿಯನ್ನು ತಿರಸ್ಕರಿಸಿದರು.

ಅದೇ ರೀತಿ ಆರೋಪಿ ಪ್ರತಿಮಾ ಸಲ್ಲಿಸಿರುವ ಜಾಮೀನು ಅರ್ಜಿಗೆ ಸರಕಾರಿ ಅಭಿಯೋಜಕರು ಆಕ್ಷೇಪಣೆ ಸಲ್ಲಿಸಲು ಮಾ.10 ಕ್ಕೆ ದಿನಾಂಕ ನಿಗದಿ ಪಡಿಸಿ ನ್ಯಾಯಾಧೀಶರು ಆದೇಶ ನೀಡಿದರು.

ಏನಿದು ಘಟನೆ: 2024ರ ಅ. 20ರಂದು ಮರ್ಣೆ ಗ್ರಾಮದ ಅಜೆಕಾರಿನ ದೆಪ್ಪುತ್ತೆ ಎಂಬಲ್ಲಿ ಬಾಲಕೃಷ್ಣ ಪೂಜಾರಿ (44) ಅವರನ್ನು ಅವರ ಪತ್ನಿ ಪ್ರತಿಮಾ ಮತ್ತು ಆಕೆಯ ಪ್ರಿಯಕರ ದಿಲೀಪ್ ಹೆಗ್ಡೆ ಸೇರಿ ಕೊಲೆ ಮಾಡಲಾಗಿತ್ತು. ಈ ಕೃತ್ಯಕ್ಕೆ ಸಂಬಂಧಿಸಿ ಆರೋಪಿಗಳನ್ನು ಅ. 25ರಂದು ಅಜೆಕಾರು ಪೊಲೀಸರು ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಿದ್ದರು.

Related Articles

Back to top button