ಶಿಕ್ಷಣ

ಅತಿಥಿ ಶಿಕ್ಷಕರ ವೇತನ ಹೆಚ್ಚಳ ಪ್ರಸ್ತಾವನೆ ತಿರಸ್ಕರಿಸಿದ ಹಣಕಾಸು ಇಲಾಖೆ 

Views: 57

ಕನ್ನಡ ಕರಾವಳಿ ಸುದ್ದಿ: ರಾಜ್ಯ ಸರಕಾರಿ ಪ್ರಾಥಮಿಕ ಪ್ರೌಢಶಾಲೆಗಳಲ್ಲಿನ ಅತಿಥಿ ಶಿಕ್ಷಕರ ವೇತನ ಹೆಚ್ಚಳಕ್ಕೆ ಸಂಬಂಧಿಸಿದಂತೆ ಹಣಕಾಸು ಇಲಾಖೆಗೆ ಕಳುಹಿಸಿದ ಪ್ರಸ್ತಾವನೆಯನ್ನು ತಿರಸ್ಕರಿಸಿದೆ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು.

ಮೇಲ್ಮನೆಯಲ್ಲಿ ಸೋಮವಾರ ಬಿಜೆಪಿಯ ಡಾ. ಧನಂಜಯ ಸರ್ಜೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು ಸರಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅತಿಥಿ ಶಿಕ್ಷಕರಿಗೆ ಪ್ರಸ್ತುತ ನೀಡಲಾಗುತ್ತಿರುವ ಮಾಸಿಕ ಗೌರವ ಧನ ಮೊತ್ತವನ್ನು 2022ರಲ್ಲಿ ಆರ್ಥಿಕ ಇಲಾಖೆಯು ಪರಿಷ್ಕರಿಸಲು ಅನುಮತಿ ನೀಡಿತ್ತು. ಈಗ ಮತ್ತೆ ಪರಿಷ್ಕರಿಸಲು ಸಾಧ್ಯವಿಲ್ಲ ಎಂದು ತಿಳಿಸಿದೆ. ಆದರೆ ಈಗ ಮರು ಪರಿಶೀಲನೆಗಾಗಿ ಮತ್ತೊಮ್ಮೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಹೇಳಿದರು.

48,000 ಅತಿಥಿ ಶಿಕ್ಷಕರಿದ್ದಾರೆ ಕನಿಷ್ಠ ವೇತನಕ್ಕೆ ಅನುಗುಣವಾಗಿಯೂ ವೇತನ ನೀಡುತ್ತಿಲ್ಲ ಹೀಗಿರುವಾಗ ಗುಣಮಟ್ಟದ ಶಿಕ್ಷಣ ಹೇಗೆ ಸಾಧ್ಯ ಎಂದು ಡಾ. ಸರ್ಜಿ ಆಕ್ರೋಶ ವ್ಯಕ್ತಪಡಿಸಿದರು.

Related Articles

Back to top button