ರಾಜಕೀಯ
ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿಲ್ಲ: ನಳೀನ್ ಕುಮಾರ್ ಕಟೀಲ್

Views: 0
ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿಲ್ಲ. ಈ ಕುರಿತಂತೆ ಮಾಧ್ಯಮಗಳಲ್ಲಿ ಬರುತ್ತಿರುವ ಮಾಹಿತಿ ಸತ್ಯಕ್ಕೆ ದೂರವಾದುದು ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ.
ಶನಿವಾರ ಅವರು ಬಳ್ಳಾರಿಯಲ್ಲಿ ನೀಡುವ ಹೇಳಿಕೆಯಲ್ಲಿ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಸ್ಥಾನಕ್ಕೆರಾಜೀನಾಮೆ ಕೊಟ್ಟಿದ್ದಾಗಿ ಹೇಳಿದ್ದಲ್ಲ ನನ್ನ ಹೇಳಿಕೆ ತಪ್ಪಾಗಿ ಅರ್ಥೈಸಿದ್ದಾರೆ.
ಪಕ್ಷದ ರಾಜ್ಯ ಘಟಕದ ಅಧ್ಯಕ್ಷರ ನೇಮಕ ಕುರಿತಂತೆ ಕೇಳಿದ ಪ್ರಶ್ನೆಗೆ ಪಕ್ಷವು ಸೂಕ್ತ ಸಂದರ್ಭದಲ್ಲಿ ನಿರ್ಧಾರ ಕೈಗೊಳ್ಳಲಿದೆ ಎಂದು ಹೇಳಿದ್ದೆ ಮತ್ತು ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸೋತ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸುವ ವೇಳೆ ಸೋಲಿನ ನೈತಿಕ ಹೊಣೆ ಹೊರುತ್ತೇನೆ ಎಂದಿದ್ದೇನೆ ಎಂದರು.