ಜನಮನ

‘ಅನ್ನಭಾಗ್ಯ’ ಮುಂದಿನ ತಿಂಗಳಿಂದ 10 ಕೆಜಿ ಅಕ್ಕಿ ವಿತರಣೆ : ಕೆ.ಎಚ್.ಮುನಿಯಪ್ಪ

Views: 0

ಬೆಂಗಳೂರು : ‘ಅನ್ನಭಾಗ್ಯ’ ಯೋಜನೆಯಡಿ ಮುಂದಿನ ತಿಂಗಳಿಂದ ಬಿಪಿಎಲ್ ಪಡಿತರ ಚೀಟಿದಾರರಿಗೆ 10 ಕೆಜಿ ಅಕ್ಕಿಯನ್ನು ನೀಡಲಾಗುವುದು’ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಖಾತೆ ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದ್ದಾರೆ.

ಗುರುವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ‘ಈಗಾಗಲೇ 10 ಕೆ.ಜಿ. ಅಕ್ಕಿ ವಿತರಣೆ ಸಂಬಂಧ ಟೆಂಡರ್ ಪ್ರಕ್ರಿಯೆ ನಡೆದಿದ್ದು, ಬರ ಪೀಡಿತ ತಾಲೂಕುಗಳಲ್ಲಿ ಹಣದ ಬದಲು ಅಕ್ಕಿಯನ್ನೇ ವಿತರಣೆ ಮಾಡಲಾಗುವುದು ಎಂದು ತಿಳಿಸಿದರು.

ಕಾಂಗ್ರೆಸ್ ಸರಕಾರ ಅನ್ನಭಾಗ್ಯ ಯೋಜನೆ ಘೋಷಿಸಿತ್ತು. ಅಕ್ಕಿಯ ಕೊರತೆ ಹಿನ್ನೆಲೆಯಲ್ಲಿ ಕೇಂದ್ರಕ್ಕೆ ಅಕ್ಕಿ ನೀಡಲು ಮನವಿ ಮಾಡಲಾಗಿತ್ತು. ಆದರೆ ಕೇಂದ್ರ ಆಹಾರ ನಿಗಮ ಕರ್ನಾಟಕ ರಾಜ್ಯಕ್ಕೆ ಅಕ್ಕಿ ಪೂರೈಸಲು ನಿರಾಕರಿಸಿತ್ತು. ಕೇಂದ್ರ ಸಚಿವರಿಗೂ ಮನವಿ ಮಾಡಿದ್ದರೂ ಅಕ್ಕಿ ನೀಡಿರಲಿಲ್ಲ. ಹೀಗಾಗಿ ಪ್ರತಿ ತಿಂಗಳು 170 ರೂ.ಹಣವನ್ನು ಫಲಾನುಭವಿಗಳ ಖಾತೆಗೆ ಜಮಾ ಮಾಡಲಾಗಿತ್ತು ಎಂದು ಮಾಹಿತಿ ನೀಡಿದರು

Related Articles

Back to top button