ಇತರೆ
ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ:ಪಿಎಸ್‌ಐ ಮಗನ ಬಂಧನ

Views: 111
ಕನ್ನಡ ಕರಾವಳಿ ಸುದ್ದಿ: ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ನಿರಂತರ ಅತ್ಯಾಚಾರ ಮಾಡಿದ ಆರೋಪದ ಮೇಲೆ ಪಿಎಸ್‌ಐ ಒಬ್ಬರ ಮಗನನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.
17 ವರ್ಷದ ಕಾಲೇಜು ವಿದ್ಯಾರ್ಥಿನಿ ಮನೆಯಲ್ಲಿ ಒಬ್ಬಳೇ ಇದ್ದಾಗ ನೀರು ಕೇಳುವ ನೆಪದಲ್ಲಿ ಮನೆಗೆ ಹೋಗಿ ಅತ್ಯಾಚಾರ ಎಸಗಿದ್ದಾನೆ ಎಂದು ತಿಳಿದು ಬಂದಿದೆ. ಆಕೆಗೆ ಹೆದರಿಸಿ ಬೆದರಿಸಿ ಏಳೆಂಟು ಭಾರಿ ನಿರಂತರ ಅತ್ಯಾಚಾರ ಎಸಗಿದ್ದು, ಬಾಲಕಿ ಗರ್ಭಿಣಿಯಾದ ಬಳಿಕ ಕಾಮುಕನ ಕೃತ್ಯ ಬೆಳಕಿಗೆ ಬಂದಿದೆ.
ದಕ್ಷಿಣ ಕನ್ನಡ ಜಿಲ್ಲೆಯ PSI ಓರ್ವರ ಮಗನಾಗಿರುವ ಕಾಮುಕನಿಗೆ ಈಗಾಗಲೇ ಮದುವೆಯಾಗಿದ್ದು, ಆತನಿಗೆ ಮಕ್ಕಳಿದ್ದಾರೆ ಎಂದು ತಿಳಿದು ಬಂದಿದೆ. ಸದ್ಯ ಆರೋಪಿಯನ್ನು BNS ಮತ್ತು ಪೋಕೋ ಕಾಯ್ದೆ ಅಡಿ ಪ್ರಕರಣ ದಾಖಲು ಮಾಡಿ ಪೊಲೀಸರು ಬಂಧಿಸಿದ್ದಾರೆ