ಅಮಿತಾಬ್ ಬಚ್ಚನ್ ಆಸ್ಪತ್ರೆಗೆ ದಾಖಲು!

Views: 69
ಬಾಲಿವುಡ್‌ನ ಹಿರಿಯ ನಟ ಅಮಿತಾಬ್ ಬಚ್ಚನ್ ಅವರು ಅನಾರೋಗ್ಯದ ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿದ್ದಾರೆ. 81 ವರ್ಷದ ಹಿರಿಯ ನಟರಾದ ಅಮಿತಾಬ್ ಬಚ್ಚನ್ ಅವರಿಗೆ ಆರೋಗ್ಯದಲ್ಲಿ ಸಮಸ್ಯೆ ಕಂಡು ಬಂದ ಹಿನ್ನೆಲೆ ಅವರನ್ನು ಮುಂಬೈನ ಆಸ್ಪತ್ರೆಗೆ ದಾಖಲಿಸಲಾಗಿದೆ.
ಶುಕ್ರವಾರ ಮುಂಜಾನೆ ಹಿರಿಯ ನಟ ಅಮಿತಾಬ್ ಬಚ್ಚನ್ ಅವರನ್ನು ಮುಂಬೈನ ಕೋಕಿಲಾಬೆನ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ವೈದ್ಯರು ನಿಗಾ ವಹಿಸಿ ಚಿಕಿತ್ಸೆ ನೀಡುತ್ತಿದ್ದಾರೆ ಎಂದು ತಿಳಿದು ಬಂದಿದೆ.
ಅಮಿತಾಬ್ ಬಚ್ಚನ್ ಅವರಿಗೆ ವಯೋಸಹಜವಾಗಿ ಇತ್ತೀಚಿನ ಕೆಲ ಸಮಯದಿಂದ ಪದೇ ಪದೇ ಅನಾರೋಗ್ಯ ಉಂಟಾಗುತ್ತಿದ್ದು, ಅಮಿತಾಬ್ ಬಚ್ಚನ್ ಅವರು ಮುಂಬೈನ ಕೋಕಿಲಾಬೆನ್ ಆಸ್ಪತ್ರೆಯಲ್ಲಿ ಆಂಜಿಯೋಪ್ಲಾಸ್ಟಿ ಚಿಕಿತ್ಸೆಗೆ ಒಳಗಾಗಿದ್ದಾರೆ ಎಂದು ತಿಳಿದು ಬಂದಿದೆ. ಕಳೆದ ಕೆಲವು ದಿನಗಳಿಂದ ಅನಾರೋಗ್ಯ ಮತ್ತು ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ.
ಸದ್ಯ ಹಿರಿಯ ನಟನ ಆರೋಗ್ಯದ ಬಗ್ಗೆ ಅಭಿಮಾನಿಗಳು ತಮ್ಮ ಕಳವಳವನ್ನು ವ್ಯಕ್ತಪಡಿಸಿದ್ದು, ಆದರೆ ಕಾಲಿನ ರಕ್ತನಾಳದ ಸಮಸ್ಯೆ ಇರುವುದರಿಂದ ಅವರಿಗೆ ಆಂಜಿಯೋಪ್ಲಾಸ್ಟಿ ಮಾಡಲಾಗಿದೆ ಎಂದು ತಿಳಿದು ಬಂದಿದೆ. ಸದ್ಯ ಹಿರಿಯ ನಟ ಅಮಿತಾಭ್ ಬಚ್ಚನ್ ಅವರ ಆರೋಗ್ಯದ ಕುರಿತು ಅಭಿಮಾನಿಗಳು ನಿರೀಕ್ಷೆಯಲ್ಲಿದ್ದಾರೆ.