ಅಸೋಡು ಆಂಗ್ಲ ಮಾಧ್ಯಮ ವಿದ್ಯಾರ್ಥಿಗಳಿಗೆ ಉಚಿತ ಪಠ್ಯಪುಸ್ತಕ ವಿತರಣೆ

Views: 1
ಕುಂದಾಪುರ : ತಾಲೂಕಿನ ಅಸೋಡು ಸರಕಾರಿ ಹಿರಿಯ ಪ್ರಾಥಮಿಕ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳಿಗೆ ಉಚಿತ ಪಠ್ಯಪುಸ್ತಕ ವಿತರಿಸಲಾಯಿತು.
ಶುಕ್ರವಾರ ಅಸೋಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಸಮಾರಂಭದಲ್ಲಿ ಪ್ರೊ.ಅಸೋಡು ಡಾ.ಅನಂತರಾಮ್ ಶೆಟ್ಟಿ ಎಜ್ಯುಕೇಶನ್ ಹೆಲ್ತ್ ಟ್ರಸ್ಟ್ (ರಿ), ಇದರ ವತಿಯಿಂದ ಒಂದರಿಂದ ನಾಲ್ಕನೇ ತರಗತಿ ವರೆಗಿನ ಎಲ್ಲಾ ಆಂಗ್ಲ ಮಾಧ್ಯಮ ವಿದ್ಯಾರ್ಥಿಗಳಿಗೆ ಉಚಿತ ಪಠ್ಯಪುಸ್ತಕ ವಿತರಣಾ ಸಮಾರಂಭ ನಡೆಯಿತು.
ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಅರುಣ್ .ಆರ್ ಅಧ್ಯಕ್ಷತೆ ವಹಿಸಿದ್ದರು. ಟ್ರಸ್ಟ್ ನ ಅಧ್ಯಕ್ಷ ದಯಾನಂದ ಹೆಗ್ಡೆ, ಅಸೂಡು ಫ್ರೆಂಡ್ಸ್ ಕ್ಲಬ್ ಅಧ್ಯಕ್ಷ ಶಿವಾನಂದ ಹೆಗ್ಡೆ, ಗ್ರಾಮ ಪಂಚಾಯತ್ ಸದಸ್ಯ ಚಂದ್ರ ಪೂಜಾರಿ, ಶಾಲಾ ಮುಖ್ಯ ಶಿಕ್ಷಕ ಶಂಕರ್ ಶೆಟ್ಟಿ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ನಾಗಪ್ಪಯ್ಯ ಶೇರಿಗಾರ, ಶಾಲಾಭಿವೃದ್ಧಿ ಸಮಿತಿಯ ಮಾಜಿ ಅಧ್ಯಕ್ಷ ಹೂವಿನಕೆರೆ ರಾಮ ಶೆಟ್ಟಿಗಾರ್ ಇದ್ದರು.
ಮುಖ್ಯೋಪಾಧ್ಯಾಯ ಶಂಕರಶೆಟ್ಟಿ ಸ್ವಾಗತಿಸಿದರು. ಸಹ ಶಿಕ್ಷಕಿ ಗಾಯತ್ರಿ ಕಾರ್ಯಕ್ರಮ ನಿರೂಪಿಸಿ, ಧನ್ಯವಾದ ಸಮರ್ಪಿಸಿದರು.
ಈ ಸಂದರ್ಭದಲ್ಲಿ ಪೋಷಕರು, ಶಿಕ್ಷಕರು, ಟ್ರಸ್ಟ್ ನ ಪದಾಧಿಕಾರಿಗಳು, ಹಳೆ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.