ಜನಮನ

ಅಸೋಡು, ಕುರುವಾಡಿ,ಹೂವಿನಕೆರೆ– ಮನೆಯಂಗಳದಲ್ಲಿ ಚಿರತೆ! :ಭಯಭೀತರಾದ ಗ್ರಾಮಸ್ಥರು

Views: 384

ಕನ್ನಡ ಕರಾವಳಿ ಸುದ್ದಿ: ಕುಂದಾಪುರ ತಾಲೂಕಿನ ಅಸೋಡು, ಹೂವಿನಕೆರೆ, ಕುರುವಾಡಿ, ಚಾರು ಕೊಟ್ಟಿಗೆ ಪರಿಸರದಲ್ಲಿ ರಾತ್ರಿ ಹಗಲೆನ್ನದೆ ಚಿರತೆ ಸಂಚರಿಸುತ್ತಿದ್ದು ಇಲ್ಲಿನ ಗ್ರಾಮಸ್ಥರು ಭಯಭೀತರಾಗಿದ್ದಾರೆ.

play-sharp-fill
ಗುಡ್ಡ ಹಾಗೂ ಮರ-ಗಿಡಗಳು ಬೆಳೆದಿರುವ ಹೂವಿನಕೆರೆ ರೈಲ್ವೆ ಬ್ರಿಡ್ಜ್, ಕುರುವಾಡಿ ಪರಿಸರದಲ್ಲಿ ಚಿರತೆ ವಾಸವಾಗಿದ್ದು ರಾತ್ರಿ ಆಗುತ್ತಿದ್ದಂತೆ ಗ್ರಾಮದ ಮನೆಗಳಿಗೆ ಪ್ರವೇಶಿಸಿ ಸಾಕು ಪ್ರಾಣಿಗಳಾದ ನಾಯಿ, ದನ ಕರುಗಳು ಮತ್ತು ಕೋಳಿಗಳ ಮೇಲೆ ದಾಳಿ ಮಾಡಿ ಹೊತ್ತುಕೊಂಡು ಹೋಗಿವೆ.

ಪ್ರತ್ಯಕ್ಷದರ್ಶಿಗಳ ಪ್ರಕಾರ ಕಳೆದ ಆರು ತಿಂಗಳಿಂದ ಎರಡು ಚಿರತೆಗಳು ಕಾಣಿಸಿಕೊಂಡಿವೆ.ಇತ್ತೀಚಿಗೆ ಪದೇ ಪದೆ ಚಿರತೆ ಕಾಣಿಸಿಕೊಂಡಿದ್ದು ಜನರಲ್ಲಿ ಆತಂಕ ಮನೆ ಮಾಡಿದೆ.

ಇಲ್ಲಿನ ರೈತರು ತಮ್ಮ ಜಮೀನಿಗೆ ಹೋಗಲು ಭಯ ಪಡುತ್ತಿದ್ದಾರೆ.ಕೂಲಿ ಕಾರ್ಮಿಕರು ಶಾಲಾ ಮಕ್ಕಳು ಭಯದಲ್ಲಿಯೇ ತಿರುಗಾಡುವ ಸ್ಥಿತಿ ಬಂದಿದೆ.

ಇತ್ತೀಚೆಗೆ ಅಸೋಡು ವನಜ ಶೇರೆಗಾರ್ತಿ ಮನೆಯ ಸಿಔಟ್ ನಲ್ಲಿ ರಾತ್ರಿ ಸುಮಾರು ಒಂದು ಗಂಟೆಯ ಹೊತ್ತಿಗೆ ಮನೆಯ ಸುತ್ತಮುತ್ತ ಚಿರತೆ ತಿರುಗಾಡಿದ್ದು, ಈ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸರೆಯಾಗಿದೆ. ಭಯಭೀತರಾದ ಗ್ರಾಮಸ್ಥರು ಅರಣ್ಯ ಇಲಾಖೆಗೆ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿಕೊಂಡಿದ್ದಾರೆ

Related Articles

Back to top button