ಅಸೋಡು: ಹಳೆ ವಿದ್ಯಾರ್ಥಿಗಳು ನೀಡಿದ ಸಮವಸ್ತ್ರ ವಿತರಣಾ ಸಮಾರಂಭ

Views: 1
ಕುಂದಾಪುರ: ಅಸೋಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಇಲ್ಲಿನ ಹಳೆ ವಿದ್ಯಾರ್ಥಿಗಳು ಕೊಡ ಮಾಡಿದ ಸಮವಸ್ತ್ರವನ್ನು ಇತ್ತೀಚಿಗೆ ವಿದ್ಯಾರ್ಥಿಗಳಿಗೆ ವಿತರಿಸಲಾಯಿತು.
ಸಮಾರಂಭದಲ್ಲಿ ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಶ್ರೀಮತಿ ಅರುಣಾ ರಾಧಾಕೃಷ್ಣ ಅವರು ಅಧ್ಯಕ್ಷತೆ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಕಾಳಾವರ ಗ್ರಾಮ ಪಂಚಾಯತ್ ಸದಸ್ಯರಾದ ಚಂದ್ರ ಪೂಜಾರಿ ಅಸೋಡು, ಶಾಲಾ ಅಭಿವೃದ್ಧಿ ಸಮಿತಿ ಸದಸ್ಯರಾದ ವಿಜಯ ಶೆಟ್ಟಿ, ಶ್ರೀರಾಮಕೃಷ್ಣ ಆಚಾರ್, ಶಾಲಾ ಪ್ರಭಾರ ಮುಖ್ಯೋಪಾಧ್ಯಾಯರಾದ ಶ್ರೀ ಶಂಕರ್ ಶೆಟ್ಟಿ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ದಾನಿಗಳು ನೀಡಿದ ಸಮವಸ್ತ್ರಗಳನ್ನು ವೇದಿಕೆಯಲ್ಲಿ ಉಪಸ್ಥಿತರಿದ್ದವರು ವಿದ್ಯಾರ್ಥಿಗಳಿಗೆ ವಿತರಿಸಿದರು.
ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಶ್ರೀಮತಿ ಅರುಣಾ ರಾಧಾಕೃಷ್ಣ ಅವರು ಮಾತನಾಡಿ, ದಾನಿಗಳು ನೀಡಿದ ಸಮವಸ್ತ್ರಗಳನ್ನು ಸದ್ ವಿನಿಯೋಗ ಮಾಡಿಕೊಂಡು ಏಕತೆ ಮತ್ತು ಒಗ್ಗಟ್ಟಿನ ಮನೋಭಾವವನ್ನು ರೂಡಿಸಿಕೊಂಡು ಕಲಿಕೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳುವಂತೆ ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ಈ ಸಂದರ್ಭದಲ್ಲಿ ಸಮವಸ್ತ್ರ ನೀಡಿದ ಶಾಲಾ ಅಭಿವೃದ್ಧಿ ಸಮಿತಿ ಹಾಗೂ ಶಾಲಾ ಪರವಾಗಿ ಅಭಿನಂದನೆ ಸಲ್ಲಿಸಿದರು.
ಶಾಲಾ ಮುಖ್ಯ ಶಿಕ್ಷಕ ಶಂಕರ್ ಶೆಟ್ಟಿ ಸ್ವಾಗತಿಸಿದರು. ಸಹ ಶಿಕ್ಷಕಿ ಗಾಯತ್ರಿ ಕಾರ್ಯಕ್ರಮ ನಿರೂಪಿಸಿದ್ದರು. ಗೌರವ ಶಿಕ್ಷಕಿ ಸ್ವಾತಿ ವಂದಿಸಿದರು.
ಈ ಸಂದರ್ಭದಲ್ಲಿ ಶಿಕ್ಷಕರು, ಶಾಲಾ ಅಭಿವೃದ್ಧಿ ಸಮಿತಿಯ ಸದಸ್ಯರು, ಪೋಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.