ಇತರೆ

ಅಸ್ಸಾಂ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಆರೋಪಿ ಪೊಲೀಸರಿಂದ ಎಸ್ಕೇಪ್ ವೇಳೆ ಕೆರೆಗೆ ಬಿದ್ದು ಸಾವು

Views: 123

ನವದೆಹಲಿ: ಅಸ್ಸಾಂನಲ್ಲಿ ಬಾಲಕಿ ಮೇಲೆ ಅತ್ಯಾಚಾರವೆಸಗಿ ಆರೋಪಿ ಪೊಲೀಸರಿಂದ ಎಸ್ಕೇಪ್‌ ಆಗುವ ವೇಳೆ ಕೆರೆಗೆ ಬಿದ್ದು ಸಾವನ್ನಪ್ಪಿರುವ ಘಟನೆ ನಡೆದಿದೆ.

ಅಪ್ರಾಪ್ತ ಬಾಲಕಿಯ ಮೇಲಿನ ಅತ್ಯಾಚಾರ ಪ್ರಕರಣದ ಪ್ರಮುಖ ಆರೋಪಿ ಇಂದು ಬೆಳಗ್ಗೆ ಪೊಲೀಸ್ ಕಸ್ಟಡಿಯಿಂದ ತಪ್ಪಿಸಿಕೊಳ್ಳಲು ಯತ್ನಿಸಿ ಆರೋಪಿ ತಫುಜಾಲ್‌ ಇಸ್ಲಾಂ ಸಾವನ್ನಪ್ಪಿದ್ದಾನೆ.

ಅಪರಾಧ ನಡೆದ ಸ್ಥಳಕ್ಕೆ ಆರೋಪಿಯನ್ನು ಮುಂಜಾನೆ 4 ಗಂಟೆ ಸುಮಾರಿಗೆ ಕರೆದೊಯ್ಯಲಾಗಿತ್ತು. ಈ ವೇಳೆ ಆರೋಪಿ ತಪ್ಪಿಸಿಕೊಳ್ಳಲು ಪೊಲೀಸರ ಮೇಲೆ ದಾಳಿ ನಡೆಸಿದ್ದಾನೆ. ನಂತರ ಪೊಲೀಸರಿಂದ ತಪ್ಪಿಸಿಕೊಳ್ಳಲು ಮುಂದಾಗಿ ಅಸ್ಸಾಂನ ನಾಗಾಂವ್ ಜಿಲ್ಲೆಯ ಧಿಂಗ್ ಎಂಬಲ್ಲಿನ ಕೊಳಕ್ಕೆ ಹಾರಿದ್ದ.

ಆರೋಪಿಗಾಗಿ ಶೋಧ ಕಾರ್ಯಾಚರಣೆ ನಡೆಸಲಾಯಿತು. ಸುಮಾರು ಎರಡು ಗಂಟೆಗಳ ನಂತರ ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್‌ಡಿಆರ್‌ಎಫ್) ಸಹಾಯದಿಂದ ಆರೋಪಿ ಮೃತದೇಹವನ್ನು ಹೊರತೆಗೆಯಲಾಯಿತು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಗುರುವಾರ ಸಂಜೆ ಅಸ್ಸಾಂನ ನಾಗಾಂವ್ ಜಿಲ್ಲೆಯಲ್ಲಿ 14 ವರ್ಷದ ಬಾಲಕಿಯ ಮೇಲೆ ಮೂವರು ಅತ್ಯಾಚಾರವೆಸಗಿದ ಘಟನೆ ನಡೆದಿತ್ತು. ಶುಕ್ರವಾರ ಆರೋಪಿಗಳನ್ನು ಬಂಧಿಸಲಾಯಿತು. ಪ್ರಕರಣದ ಇನ್ನಿಬ್ಬರು ಆರೋಪಿಗಳು ಪರಾರಿಯಾಗಿದ್ದಾರೆ.

Related Articles

Back to top button