ಸಾಂಸ್ಕೃತಿಕ

ಅ.10ಕ್ಕೆ ಕೋಟ ಕಾರಂತೋತ್ಸವಕ್ಕೆ ರಾಜ್ಯಪಾಲರು

Views: 0

ಕರ್ನಾಟಕದ ಗೌರವಾನ್ವಿತ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅ.10 ಉಡುಪಿ ಜಿಲ್ಲೆಗೆ ಆಗಮಿಸಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.

ಬೆಳಿಗ್ಗೆ 8:35 ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿ ಅಲ್ಲಿಂದ ಉಡುಪಿಗೆ ಬರಲಿದ್ದಾರೆ. ಬನ್ನಂಜೆಯಲ್ಲಿರುವ ಸರಕಾರಿ ಪ್ರವಾಸ ಮಂದಿರದಲ್ಲಿ ಬೆಳಿಗ್ಗೆ 10 ಗಂಟೆಗೆ ಜಿಲ್ಲೆಯ ಶಾಸಕರೊಂದಿಗೆ ಉಪಹಾರ ಸೇವಿಸಿ

10.30 ಕ್ಕೆ ಕೋಟ ಶಿವರಾಮ ಕಾರಂತ ಥೀಮ್ ಪಾರ್ಕ್ ಗೆ ಭೇಟಿ ನೀಡಿ ಕಾರಂತೋತ್ಸವ ಸಮಾರೋಪದಲ್ಲಿ ಭಾಗವಹಿಸಿ, ಖ್ಯಾತ ಸುಗಮ ಸಂಗೀತ ವಿದ್ವಾಂಸ ಡಾ. ವಿದ್ಯಾಭೂಷಣ ಅವರಿಗೆ ಕಾರಂತ ಹುಟ್ಟೂರು ಪ್ರಶಸ್ತಿ ಪ್ರಧಾನ ಮಾಡುವರು.

ಮಧ್ಯಾಹ್ನ 12:30ಕ್ಕೆ ಶ್ರೀ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು 2 ಗಂಟೆಗೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಹೊರಟು ಸಂಜೆ 4:25 ವಿಮಾನದಲ್ಲಿ ಬೆಂಗಳೂರಿಗೆ ಹೊರಡಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Related Articles

Back to top button