ಇತರೆ
ಆಗುಂಬೆ ಘಾಟ್‌ನ 7ನೇ ತಿರುವಿನಲ್ಲಿ ಉಡುಪಿಯ ಕಾರು ಪಲ್ಟಿ

Views: 287
ಕನ್ನಡ ಕರಾವಳಿ ಸುದ್ದಿ: ಆಗುಂಬೆ ಘಾಟಿಯ 7ನೇ ತಿರುವಿನಲ್ಲಿ ಪಲ್ಟಿಯಾಗಿದೆ.ಅದೃಷ್ಟವಶಾತ್ ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಉಡುಪಿ ಕಡೆಯಿಂದ ಶಿವಮೊಗ್ಗ ಕಡೆಗೆ ಕಾರು ಸಾಗುತ್ತಿತ್ತು. ಘಾಟಿಯ 7ನೇ ತಿರುವಿನಲ್ಲಿ ಟಿಪ್ಪರ್ ಅಡ್ಡ ಬಂದ ಪರಿಣಾಮ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಕಾರು ಪಲ್ಟಿಯಾಗಿದೆ ಎಂದು ತಿಳಿದುಬಂದಿದೆ.
ಅಪಘಾತದ ಪರಿಣಾಮ ಕಾರಿನ ಮೇಲ್ಬಾಗ ಸಂಪೂರ್ಣ ಜಖಂಗೊಂಡಿದೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದ ದಂಪತಿ ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ. ಘಟನೆ ನಡೆದ ಕೆಲಹೊತ್ತು ಇತರ ವಾಹನ ಸಂಚಾರದಲ್ಲಿ ಅಡಚಣೆ ಉಂಟಾಗಿತ್ತು. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲಿಸಿದ್ದು, ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ.