ರಾಜಕೀಯ

ಆಡಳಿತ ಪಕ್ಷ ಎಷ್ಟೇ ಟೀಕೆ ಮಾಡಿದರೂ ಈವರೆಗೂ ವಿರೋಧ ಪಕ್ಷ ನಾಯಕನನ್ನು ಆಯ್ಕೆ ಮಾಡದ ಬಿಜೆಪಿ

Views: 0

ದೇಶದ ಇತಿಹಾಸದಲ್ಲಿ ವಿರೋಧ ಪಕ್ಷ ನಾಯಕನಿಲ್ಲದೆ ಅಧಿವೇಶನ ಮುಕ್ತಾಯವಾದರೂ ಚುನಾವಣಾ ಫಲಿತಾಂಶ ಬಂದ ಬಳಿಕ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರದ ಗದ್ದುಗೆ ಏರಿತು. ಕ್ಯಾಬಿನೆಟ್ ರಚನೆ ಕೂಡ ಆಯ್ತು ,ಚುನಾವಣೆ ವೇಳೆ ಘೋಷಿಸಿದ್ದ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ಮಾಡಲಾಗುತ್ತಿದೆ. ಆದರೆ ವಿರೋಧ ಪಕ್ಷ ನಾಯಕನನ್ನು ಆಯ್ಕೆ ಮಾಡುವಲ್ಲಿ ಬಿಜೆಪಿ ಹಿಂದೆ ಬಿದ್ದಿದೆ.

ವಿಧಾನಸಭಾ ಕಲಾಪ ಆರಂಭವಾಗುವುದಕ್ಕೆ ಮುನ್ನ ನಾಯಕನ ಆಯ್ಕೆಗೆ ವರಿಷ್ಠರು ಸೂಚನೆ ನೀಡುವ ಸಾಧ್ಯತೆ ಇದೆ ಎಂದು ಬಿಜೆಪಿ ನಾಯಕರು ಹೇಳುತ್ತಿದ್ದರು. ಈವರೆಗೂ ನಾಯಕನ ಆಯ್ಕೆ ಮಾಡುವುದು ಬಿಜೆಪಿಗೆ ಸಾಧ್ಯವಾಗಲಿಲ್ಲ.

ರಾಜ್ಯ ಕಾಂಗ್ರೆಸ್ ಸರ್ಕಾರವನ್ನು ಎದುರಿಸುವ ಸಮರ್ಥ ವಿರೋಧ ಪಕ್ಷದ ನಾಯಕರನ್ನು ಆಯ್ಕೆ ಮಾಡುವಲ್ಲಿ ಬಿಜೆಪಿ ನಾಯಕರು ಸೋತಿದ್ದಾರೆ.

ಇನ್ನೊಂದೆಡೆ ಬಿಜೆಪಿಯು ಜೆಡಿಎಸ್ ನೊಂದಿಗೆ ಕೈಗೂಡಿಸಿ ಕುಮಾರಸ್ವಾಮಿ ಅವರನ್ನು ವಿಪಕ್ಷ ನಾಯಕನನ್ನಾಗಿ  ನೇಮಿಸಲಾಗುತ್ತದೆ ಎನ್ನುವ ಮಾತುಗಳು ಕೇಳಿ ಬರುತ್ತಿವೆ. ಅದೇ ಕಾರಣಕ್ಕೆ ಬಿಜೆಪಿಯ ವಿಪಕ್ಷ ನಾಯಕನ ಆಯ್ಕೆಗೆ ವಿಳಂಬ ಮಾಡಿದೆ ಎನ್ನುವ ಮಾತುಗಳು ರಾಜಕೀಯ ಪಡಸಾಲೆಯಲ್ಲಿ ಕೇಳಿ ಬಂದಿದೆ.

Related Articles

Back to top button