ಆರೋಗ್ಯ
ಆತ್ಮಹತ್ಯೆಗೆ ಶರಣಾದ ನರ್ಸಿಂಗ್ ವಿದ್ಯಾರ್ಥಿನಿ: ನಿಗೂಢ ಸಾವಿನ ಬಗ್ಗೆ ತನಿಖೆ!

Views: 118
ಕನ್ನಡ ಕರಾವಳಿ ಸುದ್ದಿ ಸುದ್ದಿ: ನರ್ಸಿಂಗ್ ವಿದ್ಯಾರ್ಥಿನಿಯೊಬ್ಬರು ಹಾಸ್ಟೇಲ್ ನಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ರಾಮನಗರ ಜಿಲ್ಲೆಯ ಹಾರೋಹಳ್ಳಿ ತಾಲೂಕಿನ ದಯಾನಂದ ಸಾಗರ ನರ್ಸಿಂಗ್ ಕಾಲೇಜಿನಲ್ಲಿ ನಡೆದಿದೆ.
ಅನಾಮಿಕಾ (19) ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾರ್ಥಿನಿ. ಕೇರಳ ಮೂಲದ ಕಣ್ಣೂರಿನ ಅನಾಮಿಕಾ, ಮೊದಲ ವರ್ಷದ ಬಿಎಸ್ ಸಿ ನರ್ಸಿಂಗ್ ವ್ಯಾಸಂಗ ಮಾಡುತ್ತಿದ್ದರು.
ಹಾಸ್ಟೇಲ್ ರೂಂ ನಲ್ಲಿಯೇ ನೇಣಿಗೆ ಕೊರಳೊಡ್ಡಿದ್ದಾರೆ. ಇತರ ವಿದ್ಯಾರ್ಥಿಗಳು ಬಾಗಿಲು ಬಡಿದರೂ ಹಾಸ್ಟೆಲ್ ರೂಂ ಬಾಗಿಲು ತೆರೆಯದಿದ್ದಾಗ ಅನುಮಾನಗೊಂಡು ಕಿಟಕಿಯಿಂದ ನೋಡಿದಾಗ ವಿದ್ಯಾರ್ಥಿನಿ ನೇಣಿಗೆ ಕೊರಳೊಡ್ಡಿರುವುದು ಬೆಳಕಿಗೆ ಬಂದಿದೆ.
ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.