ಕರಾವಳಿ

ಆನಂದ್ ಸಿ ಕುಂದರ್ ಹುಟ್ಟು ಹಬ್ಬದ ಪ್ರಯುಕ್ತ ಹೋಬಳಿ ಮಟ್ಟದ ಗೋ ಕರುಗಳ ಪ್ರದರ್ಶನ, ಸ್ಪರ್ಧೆ, ಆಮಂತ್ರಣ ಬಿಡುಗಡೆ 

Views: 157

ಕೋಟ: ಹೈನುಗಾರಿಕೆಗೆ ಪ್ರೋತ್ಸಾಹಕರ ವಾತಾವರಣ ನಿರ್ಮಾಣಕ್ಕೆ ಸರಕಾರ ಯೋಜನೆಗಳನ್ನು ರೂಪಿಸಬೇಕಾದ ಅಗತ್ಯತೆ ಇದೆ ಎಂದು ಜನತಾ ಸಮೂಹ ಸಂಸ್ಥೆಗಳ ಮುಖ್ಯಸ್ಥ ಆನಂದ್ ಸಿ ಕುಂದರ್ ಹೇಳಿದರು.

ಇದೇ ಫೆ.20ರಂದು ಕೋಟದ ಶಾಂಭವೀ ಶಾಲಾ ಮೈದಾನದಲ್ಲಿ ವಿವಿಧ ಇಲಾಖೆ ಹಾಗೂ ಸಂಘಟನೆ ಮತ್ತು ಕರುಗಳ ಪ್ರದರ್ಶನ ಸಮಿತಿ ನೇತೃತ್ವದಲ್ಲಿ ಸಮಾಜಸೇವಕ ಆನಂದ್ ಸಿ ಕುಂದರ್ ರವರ ಹುಟ್ಟಹಬ್ಬದ ವರ್ಷೋತ್ಸವದ ಅಮೃತ ಗೌರವದ ಹಿನ್ನಲೆಯಲ್ಲಿ ಹೋಬಳಿ ಮಟ್ಟದ ಗೋ ಕರುಗಳ ಪ್ರದರ್ಶನ,ಸ್ಪರ್ಧೆ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿ ಮಾತನಾಡಿ ಪ್ರಸ್ತುತ ವಿದ್ಯಾಮಾನಗಳಲ್ಲಿ ಹೈನುಗಾರಿಕೆ ಸಂಕಷ್ಟ ಸ್ಥಿತಿಯನ್ನು ಅನುಭವಿಸುತ್ತಿದೆ ಈ ದಿಸೆಯಲ್ಲಿ ಹೊಸ ಹೊಸ ಆವಿಷ್ಕಾರಗಳ ಮೂಲಕ ಹೈನುಗಾರಿಕೆಯನ್ನು ಗಟ್ಟಿಗೊಳಿಸಬೇಕಾದ ಅಗತ್ಯತೆಯನ್ನು ಮನವರಿಕೆ ಮಾಡಿ ತಮ್ಮ ಹುಟ್ಟುಹಬ್ಬದ ವರ್ಷೋತ್ಸವಕ್ಕೆ ಪ್ರಕೃತಿದತ್ತವಾದ ಗೋ ಕರುಗಳ ಪ್ರದರ್ಶನಕ್ಕೆ ವೇದಿಕೆಯಾಗಿರಿಸಿದನ್ನು ಸಂಘಟಕರಿಗೆ ಕೃತಜ್ಞತೆ ಸಲ್ಲಿಸಿದರು.

ಈ ವೇಳೆ ಗೋ ಕರುಗಳ ಸ್ಪರ್ಧೆ ಹಾಗೂ ಪ್ರದರ್ಶನ ಸಮಿತಿ ಅಧ್ಯಕ್ಷ ಜಿ.ತಿಮ್ಮ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು.

ಮುಖ್ಯ ಅಭ್ಯಾಗತರಾಗಿ ಕೋಟತಟ್ಟು ಗ್ರಾಮಪಂಚಾಯತ್ ಅಧ್ಯಕ್ಷ ಸತೀಶ್ ಕುಂದರ್, ಸಾಲಿಗ್ರಾಮ ಶ್ರೀ ಗುರುನರಸಿಂಹ ದೇಗುಲದ ಆಡಳಿತ ಮಂಡಳಿಯ ಸದಸ್ಯ ಕೆ.ಅನಂತಪದ್ಮನಾಭ ಐತಾಳ್,ಪಾರಂಪಳ್ಳಿ ಪರಿಸರದ ಹಿರಿಯ ಕೃಷಿಕ ರಘು ಮಧ್ಯಸ್ಥ,ಕೋಟತಟ್ಟು ಹಾಲು ಉತ್ಪಾದಕರ ಸಂಘದ ಅಧ್ಯಕ್ಷ ಶಿವಮೂರ್ತಿ ಕೆ,ಜನತಾ ಫಿಶ್ ಮಿಲ್ ನಿರ್ದೇಶಕ ಪ್ರಶಾಂತ್ ಎ. ಕುಂದರ್,ವ್ಯವಸ್ಥಾಪಕ ಶ್ರೀನಿವಾಸ್ ಕುಂದರ್,ಕೆ.ಎಂ ಎಫ್ ವಿಸ್ತೀರ್ಣಾಧಿಕಾರಿ ಸರಸ್ವತಿ ,ಕೋಟ ಪಶು ಆಸ್ಪತ್ರೆ ಇದರ ವೈದ್ಯಾಧಿಕಾರಿ ಡಾ.ಅನಿಲ್ ಕುಮಾರ್,ಸಂತೆಕಟ್ಟೆ ಪಶು ಆಸ್ಪತ್ರೆ ಇದರ ವೈದ್ಯಾಧಿಕಾರಿ ಡಾ.ಮಂಜುನಾಥ ಅಡಿಗ,ಪಂಚವರ್ಣ ಯುವಕ ಮಂಡಲದ ಅಧ್ಯಕ್ಷ ಅಜಿತ್ ಆಚಾರ್,ಪಂಚವರ್ಣ ಮಹಿಳಾ ಮಂಡಲದ ಅಧ್ಯಕ್ಷೆ ಲಲಿತಾ ಪೂಜಾರಿ,ಕೋಟ ಸಹಕಾರಿ ವ್ಯವಸಾಯಕ ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ಶರತ್ ಕುಮಾರ್ ಶೆಟ್ಟಿ,ಪಂಚವರ್ಣ ಯುವಕ ಮಂಡಲದ ಸದಸ್ಯರು ಇದ್ದರು.ಪಂಚವರ್ಣ ಮಹಿಳಾ ಮಂಡಲದ ಸಂಚಾಲಕಿ ಸುಜಾತ ಬಾಯರಿ ಕಾರ್ಯಕ್ರಮ ನಿರೂಪಿಸಿದರೆ,ಯುವಕ ಮಂಡಲದ ಕಾರ್ಯಾಧ್ಯಕ್ಷ ರವೀಂದ್ರ ಕೋಟ ವಂದಿಸಿದರು.

 

Related Articles

Back to top button