ರಾಜಕೀಯ
ಆಮ್ ಆದ್ಮಿ ಪಕ್ಷದ ನೂತನ ರಾಜ್ಯಾಧ್ಯಕ್ಷರಾಗಿ ಮುಖ್ಯಮಂತ್ರಿ ಚಂದ್ರು ನೇಮಕ

Views: 0
ಆಮ್ ಆದ್ಮಿ ಪಕ್ಷದ ನೂತನ ರಾಜ್ಯ ಅಧ್ಯಕ್ಷರಾಗಿ ಹಿರಿಯ ನಟ ಹಾಗೂ ರಾಜಕಾರಣಿ ಮುಖ್ಯಮಂತ್ರಿ ಚಂದ್ರು ಅವರನ್ನು ನೇಮಕ ಮಾಡಲಾಗಿದೆ.
ಈವರೆಗೂ ರಾಜ್ಯ ಘಟಕದ ಅಧ್ಯಕ್ಷರಾಗಿದ್ದ ಪೃಥ್ವಿ ರೆಡ್ಡಿ ಅವರನ್ನು ಎಎಪಿ ರಾಷ್ಟ್ರೀಯ ಜಂಟಿ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ.
ರಾಜ್ಯ ಸಂಘಟನಾ ಕಾರ್ಯದರ್ಶಿಯಾಗಿ ಬಿ.ಟಿ. ನಾಗಣ್ಣ ಮತ್ತು ಅಜುಗನ್ ಹಲಗಿ ಗೌಡ ಅವರನ್ನು ನೇಮಕ ಮಾಡಲಾಗಿದೆ.
ಅದೇ ರೀತಿ ಇತ್ತೀಚಿಗೆ ನಡೆದ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಎಎಪಿ ಖಾತೆ ತೆರೆಯಬೇಕೆಂಬ ಉದ್ದೇಶದೊಂದಿಗೆ ರಾಜ್ಯದ ನಾನಾ ಕಡೆಗಳಲ್ಲಿ ಸಂಚರಿಸ ಪಕ್ಷ ಸಂಘಟನೆಗೆ ಯತ್ನಿಸಿದ ಪೃಥ್ವಿ ರೆಡ್ಡಿ ಅವರನ್ನು ಎಎಪಿ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ