ಇತರೆ
ಆಯಿಲ್ ಟ್ಯಾಂಕ್ ಸ್ಫೋಟ: ಇಬ್ಬರು ಕಾರ್ಮಿಕರು ಸಾವು

Views: 35
ಕನ್ನಡ ಕರಾವಳಿ ಸುದ್ದಿ: ಆಯಿಲ್ ಟ್ಯಾಂಕ್ ಸ್ಫೋಟಗೊಂಡು ಇಬ್ಬರು ಕಾರ್ಮಿಕರು ಸಾವನ್ನಪ್ಪಿರುವ ಘಟನೆ ತುಮಕೂರಿನ ಅಂತಸರನಹಳ್ಳಿ ಕೈಗಾರಿಕಾ ಪ್ರದೇಶದ ಪರಿಮಳ ಆಗ್ರೋ ಫುಡ್ ಇಂಡ್ರಸ್ಟ್ರೀಸ್ ನಲ್ಲಿ ನಡೆದಿದೆ.
ಭತ್ತದ ಹೊಟ್ಟಿನಿಂದ ಎಣ್ಣೆ ತೆಗೆಯುವ ಆಗ್ರೋ ಫುಡ್ ಇಂಡಸ್ಟ್ರೀಸ್ ಇದಾಗಿದ್ದು, ಐವರು ಕಾರ್ಮಿಕರು ಕೆಲಸ ಮಾಡುತ್ತಿದ್ದರು. ಈ ವೇಳೆ ಏಕಾಏಕಿ ಆಯಿಲ್ ಟ್ಯಾಂಕ್ ಸ್ಫೋಟಗೊಂಡಿದ್ದು, ಸ್ಥಳದಲ್ಲೇ ಇಬ್ಬರು ಕಾರ್ಮಿಕರು ಸಾವನ್ನಪ್ಪಿದ್ದಾರೆ.