ಕ್ರೀಡೆ
ಆರ್‌ಸಿಬಿ ಗೆದ್ದ ಖುಷಿಯಲ್ಲಿ ಸಂಭ್ರಮಾಚರಣೆ ಎರಡು ಬೈಕ್ ಮುಖಾಮುಖಿ ಡಿಕ್ಕಿ :ಯುವಕ ದುರ್ಮರಣ

Views: 220
ಕನ್ನಡ ಕರಾವಳಿ ಸುದ್ದಿ: ಐಪಿಎಲ್ ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಪಂಜಾಬ್ ತಂಡವನ್ನು 6 ರನ್ ಗಳಿಂದ ಸೋಲಿಸಿ ಚೊಚ್ಚಲ ಐಪಿಎಲ್ ಟ್ರೋಫಿಯನ್ನು ಎತ್ತಿ ಹಿಡಿದಿದೆ. ಈ ಹಿನ್ನೆಲೆ, ನಿನ್ನೆ ರಾತ್ರಿಯಿಂದ ಸಂಭ್ರಮಾಚರಣೆ ಜೋರಾಗಿದ್ದು, ಈ ವೇಳೆ 2 ಬೈಕ್ ಗಳು ಮುಖಾಮುಖಿ ಡಿಕ್ಕಿ ಹೊಡೆದು ಓರ್ವ ಯುವಕ ಸಾವನ್ನಪ್ಪಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.
ಶಿವಮೊಗ್ಗದಲ್ಲಿ ಆರ್‌ಸಿಬಿ ಗೆದ್ದ ಖುಷಿಯಲ್ಲಿ ಸಂಭ್ರಮಾಚರಣೆ ಜೋರಾಗಿತ್ತು ಎಲ್ಲೆಡೆ ಪಟಾಕಿ ಸಿಡಿಸಿ, ಯುವಕರು ಕುಣಿದು ಕುಪ್ಪಳಿಸುತ್ತಿದ್ದರು. ಆದರೆ ಸೆಲೆಬ್ರೇಶನ್ ವೇಳೆ ಆರ್‌ಸಿಬಿ ಅಭಿಮಾನಿಯೊಬ್ಬ ಸಾವನಪ್ಪಿದ್ದಾನೆ. ಬೈಕ್ ನಲ್ಲಿ ಸೆಲೆಬ್ರೇಶನ್ ಮಾಡುವ ವೇಳೆ ಅಪಘಾತ ಸಂಭವಿಸಿದೆ.