ರಾಜಕೀಯ
ಇಂಗ್ಲೀಷ್ ಭಾಷೆ ಬರುವುದಿಲ್ಲ ಎಂದು ಕೋಟ ಶ್ರೀನಿವಾಸ ಪೂಜಾರಿಗೆ ಹಿಂಜರಿಕೆ ಬೇಡ: ಒಂದೇ ತಿಂಗಳಲ್ಲಿ ಇಂಗ್ಲೀಷ್ ಕಲಿಸುತ್ತೇನೆ ಬೆಳಗಾವಿ ಟ್ರೈನರ್!

Views: 131
ಬೆಳಗಾವಿ: ಉಡುಪಿ -ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಹಿಂದಿ, ಇಂಗ್ಲೀಷ್ ಬರುವುದಿಲ್ಲ. ಅವರಿಗೆ ಮತ ಹಾಕಬೇಡಿ ಎಂಬ ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ಹೇಳಿಕೆ ವಿವಾದಕ್ಕೆ ಕಾರಣವಾಗಿದೆ. ಈ ಬಗ್ಗೆ ಹೆಗ್ಡೆ ವಿರುದ್ಧ ಬಿಜೆಪಿ ದೂರನ್ನೂ ಕೊಟ್ಟಿದೆ. ಈಗ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಒಂದು ತಿಂಗಳಲ್ಲೇ ಇಂಗ್ಲೀಷ್ ಕಲಿಸುವುದಾಗಿ ಬೆಳಗಾವಿಯ ಇಂಗ್ಲೀಷ್ ಟ್ರೆನರ್‌ವೊಬ್ಬರು ಮುಂದೆ ಘೋಷಿಸಿದ್ದಾರೆ.
ಜಿ.ಎಲ್. ಮಂಜುನಾಥ ಎಂಬ ಇಂಗ್ಲೀಷ್ ಟ್ರೈನರ್ ಈಗ ಈ ಬಗ್ಗೆ ಹೇಳಿದ್ದಾರೆ. ಮೂಲತಃ ಹಾಸನದವರಾಗಿರುವ ಮಂಜುನಾಥ್ ಬೆಳಗಾವಿಯಲ್ಲಿ ಕಳೆದ 20 ವರ್ಷಗಳಿಂದ ಟೈಮ್ ಟ್ರೈನಿಂಗ್ ಅಕಾಡೆಮಿಯನ್ನು ನಡೆಸುತ್ತಿದ್ದಾರೆ. ಇಂಗ್ಲೀಷ್ ಭಾಷೆ ಬರುವುದಿಲ್ಲ ಎಂದು ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಹಿಂಜರಿಕೆ ಬೇಡ. ನಾನು ಅವರಿಗೆ ಒಂದೇ ತಿಂಗಳಲ್ಲಿ ಇಂಗ್ಲಿಷ್ ಕಲಿಸುತ್ತೇನೆ. ಅದರಲ್ಲೂ ಉಚಿತವಾಗಿ ಹೇಳಿಕೊಡುತ್ತೇನೆ ಎಂದು ತಿಳಿಸಿದ್ದಾರೆ.