ಯುವಜನ

ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ: ಕಸದ ವಾಹನದಲ್ಲಿ ಮೃತದೇಹ ಶವಾಗಾರಕ್ಕೆ, ತೀವ್ರ ಆಕ್ರೋಶ

Views: 126

ಕನ್ನಡ ಕರಾವಳಿ ಸುದ್ದಿ: ಇಂಜಿನಿಯರಿಂಗ್ ವಿದ್ಯಾರ್ಥಿಯೋರ್ವ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ದೇವಗಿರಿ ಗ್ರಾಮದಲ್ಲಿ ನಡೆದಿದೆ.

ಮೃತ ವಿದ್ಯಾರ್ಥಿಯನ್ನು 22 ವರ್ಷದ ಉಲ್ಲಾಸ್ ಎಂದು ಗುರುತಿಸಲಾಗಿದೆ.

ವಿದ್ಯಾರ್ಥಿಯ ಮೃತದೇಹವನ್ನು ಹಾವೇರಿ ನಗರಸಭೆಯ ಕಸದ ವಾಹನದಲ್ಲಿ ಶವಾಗಾರಕ್ಕೆ ತರಲಾಗಿದೆ. ಇದು ವಿದ್ಯಾರ್ಥಿ ಸಂಘಟನೆಗಳ ಆಕ್ರೋಶಕ್ಕೆ ಕಾರಣವಾಗಿದೆ.

ಉಲ್ಲಾಸ್ ಬೆಳಗಾವಿ ಮೂಲದ ಬೈಲಹೊಂಗಲದ ವಿದ್ಯಾರ್ಥಿಯಾಗಿದ್ದು, ಇಂಜಿನಿಯರಿಂಗ್ 4ನೇ ಸೆಮಿಸ್ಟರ್ ಓದುತ್ತಿದ್ದ. ಪರೀಕ್ಷೆಯ ಒತ್ತಡದಿಂದ ಉಲ್ಲಾಸ್ ವೀರಪ್ಪ ಮುರಳಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ಶಂಕಿಸಿದ್ದಾರೆ.

ಸ್ಥಳಕ್ಕೆ ಹಾವೇರಿ ಗ್ರಾಮೀಣ ಠಾಣೆಯ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ನಂತರ ಪೊಲೀಸರು ಹಾಗೂ ಸ್ಥಳೀಯರು ಸೇರಿ ಕೆರೆಯಲ್ಲಿದ್ದ ಉಲ್ಲಾಸನ ಮೃತದೇಹ ಹೊರಗೆ ತೆಗೆದಿದ್ದಾರೆ. ಹಾವೇರಿ ಗ್ರಾಮೀಣ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

 

Related Articles

Back to top button