ರಾಜಕೀಯ

ಇಂದು ಜಯಪ್ರಕಾಶ್ ಹೆಗ್ಡೆ ಬೆಂಗಳೂರಿನಲ್ಲಿ ಕಾಂಗ್ರೆಸ್ ಸೇರ್ಪಡೆ

Views: 74

ಉಡುಪಿ: ರಾಜ್ಯ ಹಿಂದುಳಿದ ವರ್ಗಗಳ  ಆಯೋಗದ ಮಾಜಿ ಅಧ್ಯಕ್ಷ ಕೆ. ಜಯಪ್ರಕಾಶ್ ಹೆಗ್ಡೆ ಇಂದು  ಬೆಂಗಳೂರಿನ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಪಕ್ಷ ಸೇರ್ಪಡೆ ಯಾಗಲಿದ್ದಾರೆ.

ಜಯಪ್ರಕಾಶ್ ಹೆಗ್ಡೆ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ    ಪಟ್ಟಿಯಲ್ಲಿ ಹೆಸರಿರುವ ಕಾರಣ  ಸೇರ್ಪಡೆಗೆ ಕಾರಣ ಎನ್ನಲಾಗಿದೆ.

2012ರಲ್ಲಿ ನಡೆದ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಗೆದ್ದು ಸಂಸದರಾಗಿದ್ದರು. ಬಳಿಕ ಕಾಂಗ್ರೆಸ್ ಪಕ್ಷ ತ್ಯಜಿಸಿ ಬಿಜೆಪಿಗೆ ಸೇರಿಕೊಂಡಿದ್ದರು. ಬಿಜೆಪಿ ಸರಕಾರ ಇದ್ದಾಗ ಇವರನ್ನು ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿ ನೇಮಿಸಿತ್ತು.

ಆಯೋಗದ ಅಧ್ಯಕ್ಷ ಅವಧಿ‌ ಮುಗಿದ ಆನಂತರ ಕಾಂಗ್ರೆಸ್ ಸೇರುವ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರೊಂದಿಗೆ ಚರ್ಚೆ ನಡೆಸಿದ್ದರು.

Related Articles

Back to top button