ಇಂದು ಪ್ರತಿಪಕ್ಷ ನಾಯಕನ ಹೆಸರು ಬಿಜೆಪಿ ಘೋಷಣೆ

Views: 0
ವಿಧಾನಸಭೆಯ ಪ್ರತಿಪಕ್ಷ ನಾಯಕನ ಹೆಸರನ್ನು ಇಂದು ದೆಹಲಿಯಲ್ಲಿ ಹೆಸರು ಘೋಷಣೆಯಾಗುವ ಸಾಧ್ಯತೆ ಇದೆ.
ಬಿ.ಎಸ್ .ಯಡಿಯೂರಪ್ಪಗೆ ದೆಹಲಿ ವರಿಷ್ಠರಿಂದ ಬುಲಾವ್ ಬಂದಿರುವುದರಿಂದ ಶನಿವಾರ ಕರೆಯಲಾಗಿದ್ದ ಶಾಸಕರ ಸಭೆಯನ್ನು ಹಠಾತ್ ರದ್ದುಪಡಿಸಲಾಗಿದೆ.
ಸೋಮವಾರ ಜುಂಟಿ ಅಧಿವೇಶನ ಆರಂಭವಾಗಲಿದ್ದು, ಆ ವೇಳೆಗೆ ಪ್ರತಿಪಕ್ಷ ನಾಯಕನ ನೇಮಕದ ಅನಿವಾರ್ಯ ಬಿಜೆಪಿಗೆ ಇದೆ. .
ಆರಂಭದಲ್ಲಿ ಬೆಂಗಳೂರಿನಲ್ಲಿಯೇ ರಾಜ್ಯ ಉಸ್ತುವಾರಿ ಅರುಣ್ ಸಿಂಗ್, ಧರ್ಮೇಂದ್ರ ಪ್ರಧಾನ ಪ್ರತಿಪಕ್ಷದ ನಾಯಕನನ್ನು ಘೋಷಣೆ ಮಾಡಲಿದ್ದಾರೆ ಎನ್ನಲಾಗಿತ್ತು.
ಇದೀಗ ದೆಹಲಿಯಲ್ಲಿ ವರಿಷ್ಠರೇ ಹೆಸರು ಪ್ರಕಟಿಸಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.
ಅಂತಿಮವಾಗಿ ಬಿ.ಎಸ್. ಯಡಿಯೂರಪ್ಪ ಜೊತೆ ಚರ್ಚಿಸಿದ ಬಳಿಕ ಹೆಸರು ಅಂತಿಮವಾಗಲಿದೆ ಎನ್ನುವ ಮಾತುಗಳು ಕೇಳಿ ಬಂದಿದೆ.
ಈ ಸ್ಥಾನಕ್ಕೆ ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್, ಮಾಜಿ ಸಚಿವ ಸುನಿಲ್ ಕುಮಾರ್, ಆರ್ ಅಶೋಕ್, ಅರವಿಂದ ಬೆಲ್ಲದ್ ಹೆಸರು ಮುಂಚೂಣಿಯಲ್ಲಿದೆ.
ಆಡಳಿತ ಪಕ್ಷವನ್ನು ಸದನದಲ್ಲಿ ಸಮರ್ಥವಾಗಿ ಎದುರಿಸಲು ಪ್ರಬಲ ನಾಯಕನ ಅಗತ್ಯವಿರುವುದರಿಂದ ಪ್ರಚಲಿತ ವಿದ್ಯಮಾನ,ಸಂಸದೀಯ ನಡವಳಿಕೆಗಳು, ಹಣಕಾಸು ಸೇರಿ ಹಲವು ವಿಷಯಗಳಲ್ಲಿ ಪರಿಣಿತಿ ಹೊಂದಿದವರನ್ನು ಆಯ್ಕೆ ಮಾಡಬೇಕೆಂದು ಅಭಿಪ್ರಾಯ ವ್ಯಕ್ತವಾಗಿದೆ.
ಈ ಬೆಳವಣಿಗೆಯಲ್ಲಿ ವಿಪಕ್ಷ ನಾಯಕನ ಸ್ಥಾನದ ಮೇಲೆ ಕಣ್ಣು ಇಟ್ಟಿರುವ ಹಲವು ನಾಯಕರಿಗೆ ಲೆಕ್ಕಾಚಾರ ತಲೆಕೆಳಗಾಗುವ ಸಾಧ್ಯತೆ ಇದೆ.
ಈ ನಡುವೆ ಪ್ರತಿಪಕ್ಷ ನಾಯಕನನ್ನು ಆಯ್ಕೆ ಮಾಡುವಲ್ಲಿ ವಿಫಲವಾಗಿದೆ ಬಿಜೆಪಿಗೆ ಪ್ರಜಾಪ್ರಭುತ್ವವನ್ನು ಗಟ್ಟಿಗೊಳಿಸಲು ಪ್ರತಿಪಕ್ಷ ನಾಯಕರೊಬ್ಬರು ಬೇಕಾಗಿದ್ದಾರೆ ಎಂದು ಟ್ವಿಟ್ಟರ್ ನಲ್ಲಿ ಕಾಂಗ್ರೆಸ್ ವ್ಯಂಗ್ಯ ಮಾಡಿದೆ.
ವಿರೋಧ ಪಕ್ಷದ ನಾಯಕನ ಸ್ಥಾನಕ್ಕೆ ಬಸವನಗೌಡ ಪಾಟೀಲ್ ಯತ್ನಾಳ್ ಪ್ರಯತ್ನಿಸಿದ್ದು, ತಮ್ಮ ವಿರುದ್ಧ ನಿರಂತರ ವಾಗ್ದಾಳಿ ನಡೆಸಿಕೊಂಡು ಬಂದು ಸರ್ಕಾರದ ವರ್ಚಸ್ಸನ್ನು ಕೆಡಲು ಯತ್ನಾಳ್ ಕಾರಣ ಎಂದು ವಾದಿಸುತ್ತಿರುವ ಯಡಿಯೂರಪ್ಪ ಯತ್ನಾಳ್ ಆಯ್ಕೆಗೆ ಸುತರಾಂ ಒಪ್ಪುವುದಿಲ್ಲ. ಹೀಗಾಗಿ ಬಸವರಾಜ ಬೊಮ್ಮಾಯಿ ಆಯ್ಕೆ ಸಾಧ್ಯತೆ ಹೆಚ್ಚು ಎಂದು ಮೂಲಗಳಿಂದ ತಿಳಿದು ಬಂದಿದೆ.