ಜನಮನ
ಇದೀಗ ಶೀಘ್ರದಲ್ಲೇ 6ನೇ ಗ್ಯಾರಂಟಿ ಘೋಷಣೆ..!

Views: 75
ಗ್ಯಾರಂಟಿಗಳ ಮೂಲಕ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್, ಕೊಟ್ಟ ಮಾತಿನಂತೆ ಹಂತ ಹಂತವಾಗಿ ಶಕ್ತಿ ಯೋಜನೆ, ಗೃಹ ಲಕ್ಷ್ಮೀ, ಗೃಹ ಜ್ಯೋತಿ, ಅನ್ನಭಾಗ್ಯ ಹಾಗೂ ಯುವ ನಿಧಿ ಯೋಜನೆಯನ್ನ ಜಾರಿಗೊಳಿಸಿದೆ. ಇದೀಗ ಶೀಘ್ರದಲ್ಲೇ ಸರ್ಕಾರದ 6ನೇ ಗ್ಯಾರಂಟಿ ಘೋಷಣೆ ಮಾಡಲಾಗುವುದು ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.
ಗುರುವಾರ ಮಾಗಡಿ ಕೋಟೆ ಮೈದಾನದಲ್ಲಿ ಆಯೋಜಿಸಿದ್ದ ಕಾಂಗ್ರೆಸ್ ಗ್ಯಾರಂಟಿ ಸಮಾವೇಶ ಉದ್ಘಾಟಿಸಿ ಮಾತನಾಡಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಶೀಘ್ರದಲ್ಲೇ ಸರ್ಕಾರದ 6ನೇ ಗ್ಯಾರಂಟಿ ಘೋಷಣೆ ಮಾಡುವ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರ ಜೊತೆಗೆ ಚರ್ಚೆ ನಡೆಸಲಾಗುವುದು ಎಂದು ಹೇಳಿದರು. ಇನ್ನೂ ಆಶಾಕಾರ್ಯಕರ್ತೆಯರು ಹಾಗೂ ಅಂಗನವಾಡಿ ಕಾರ್ಯಕರ್ತೆಯರಿಗಾಗಿ ಆರನೇ ಗ್ಯಾರಂಟಿ ನೀಡುವ ಕುರಿತು ಸರ್ಕಾರದ ಮಟ್ಟದಲ್ಲಿ ಚರ್ಚೆ ಮಾಡ್ತೇವೆ ಎಂದು ತಿಳಿಸಿದರು.