ಕರಾವಳಿ
ಇನ್ನೂ ನಾಲ್ಕು ದಿನ ಮಳೆ ಅಬ್ಬರ: ಹವಾಮಾನ ಇಲಾಖೆ ಮುನ್ನೆಚ್ಚರಿಕೆ

Views: 0
ರಾಜ್ಯದ ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಬಹುತೇಕ ಭಾಗದಲ್ಲಿ ಸೋಮವಾರದಿಂದ ನಾಲ್ಕು ದಿನಗಳ ಕಾಲ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.
ಕರಾವಳಿ ವ್ಯಾಪ್ತಿಯಲ್ಲಿ ಬರುವ ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಕೊಡಗು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ.
ಜುಲೈ 25ಕ್ಕೆ ಬೀದರ್, ಕಲಬುರಗಿ, ಯಾದಗಿರಿ,ಬೆಳಗಾವಿ ,ಉತ್ತರ ಕನ್ನಡ, ಹಾವೇರಿ, ಶಿವಮೊಗ್ಗ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉಡುಪಿ, ಹಾಸನ,ಕೊಡಗು, ಬಳ್ಳಾರಿ ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ ಘೋಷಣೆ ಮಾಡಿದೆ.
ಕರಾವಳಿ ಜಿಲ್ಲೆಗೆ ನಾಲ್ಕು ದಿನ ಎಲ್ಲೋ ಅಲರ್ಟ್ ಘೋಷಣೆಯಾಗಿದ್ದು, ಕರಾವಳಿಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದ್ದು ಗಂಟೆಗೆ 40 ರಿಂದ 45 ಕಿ.ಮೀ ನಿಂದ 50 ಕಿ. ಮೀಟರ್ ವೇಗದಲ್ಲಿ ಬಲವಾದ ಗಾಳಿ ಬೀಸುವ ಸಾಧ್ಯತೆ ಇದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಸೂಚನೆ ನೀಡಿದೆ.