ಯುವಜನ

ಇನ್‌ಸ್ಟಾಗ್ರಾಂ ಹುಡುಗಿಯೊಬ್ಬಳಿಗೆ ಲೈಕ್ ವಿವಾದ: ದೈವದ ಪಾತ್ರಿ ಆತ್ಮಹತ್ಯೆ

Views: 223

ಕನ್ನಡ ಕರಾವಳಿ ಸುದ್ದಿ:ಇನ್‌ಸ್ಟಾಗ್ರಾಂ ಹುಡುಗಿಯೊಬ್ಬಳಿಗೆ ಲೈಕ್ ವಿವಾದದಲ್ಲಿ ವಿವಾಹ ನಿಶ್ಚಿತಾರ್ಥಗೊಂಡ ಹುಡುಗಿ ಪ್ರಶ್ನೆ ಮಾಡಿದ್ದಕ್ಕೆ ದೈವದ ಪಾತ್ರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಪುಂಜಾಲಕಟ್ಟೆಯಲ್ಲಿ ನಡೆದಿದೆ.

ಬಂಟ್ವಾಳ ತಾಲೂಕಿನ ಕುಕ್ಕಿಪಾಡಿ ಗ್ರಾಮದ ಎಲ್ಲೇಲು ನಿವಾಸಿ ಚೇತನ್ (25) ಆತ್ಮಹತ್ಯೆ ಮಾಡಿಕೊಂಡವರು. ದೈವದ ಪಾತ್ರಿಯಾಗಿದ್ದ ಇವರು ,ಇನ್‌ಸ್ಟಾಗ್ರಾಂನಲ್ಲಿ ಪರಿಚಯವಾದ ಕಂದಾವರ ಗ್ರಾಮದ ಓಣಿಬಾಗಿಲು ಮನೆ ನಿವಾಸಿ  ಚೈತನ್ಯಾಳೊಂದಿಗೆ 8 ತಿಂಗಳ ಹಿಂದೆ ನಿಶ್ಚಿತಾರ್ಥ ಮಾಡಿಕೊಂಡಿದ್ದರು.

ಜನವರಿ. 21ರಂದು ಬೆಳಗ್ಗೆ ಚೇತನ್ ಮಾತ್ರ ಮನೆಯಲ್ಲಿದ್ದು, ತಾಯಿ ಪುಷ್ಪಾ ಅವರು ತನ್ನ ತವರು ಮನೆಯಲ್ಲಿದ್ದ ಸಮಯ ಚೈತನ್ಯಾಳು ಅವಳ ಮೊಬೈಲ್‌ನಿಂದ ಪುಷ್ಪಾ ಅವರಿಗೆ ಕರೆ ಮಾಡಿ, ನಾನು ನಿಮ್ಮ ಮನೆಗೆ ಬಂದಿದ್ದೇನೆ, ಚೇತನ್ ಮನೆಯಲ್ಲಿ ಮಲಗಿದ್ದು ಎದ್ದೇಳುತ್ತಿಲ್ಲ ಕೂಡಲೇ ಮನೆಗೆ ಬನ್ನಿ ಎಂದು ತಿಳಿಸಿದ್ದಳು.

ಪುಷ್ಪಾ ಅವರು 11.30 ಗಂಟೆಗೆ ಬಂದು ನೋಡಿದಾಗ ಮನೆಯ ಬಾತ್ ರೂಂ ಮತ್ತು ಮನೆಯ ಮಧ್ಯೆ ಇರುವ ಪ್ಯಾಸೇಜ್‌ನಲ್ಲಿ ಚೇತನ್ ಮಲಗಿದ ಸ್ಥಿತಿಯಲ್ಲಿದ್ದು, ಎಬ್ಬಿಸಲು ಪ್ರಯತ್ನಿಸಿದರೂ ಏಳದೇ ಇದ್ದಾಗ, ಪುಷ್ಪಾ ಅವರು ಮನೆಯ ಛಾವಣಿ ಕಡೆ ನೋಡಿದಾಗ ಲುಂಗಿಯಲ್ಲಿ ನೇಣು ಹಾಕಿದ ರೀತಿಯಲ್ಲಿ ನೋಡಿದ್ದಾರೆ.

ಚೇತನ್ ಇನ್‌ಸ್ಟಾಗ್ರಾಂನಲ್ಲಿ ಹುಡುಗಿಯೊಬ್ಬಳಿಗೆ ಲೈಕ್ ಮಾಡಿರುವುದನ್ನು ಪ್ರಶ್ನಿಸಲು ತಾನು ಮನೆಗೆ ಬಂದಿರುವುದಾಗ ಈ ವಿಚಾರದ ಬಗ್ಗೆ ಗಲಾಟೆಯಾಗಿತ್ತು. ಇದರಿಂದ ಬೇಸರಗೊಂಡ ಚೇತನ್ ಮನೆಯೊಳಗೆ ಓಡಿ ಹೋಗಿ ಛಾವಣಿಯ ಅಡ್ಡಕ್ಕೆ ಲುಂಗಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ತಾನೇ ಕೆಳಗಿಳಿಸಿ ಆರೈಕೆ ಮಾಡಿರುವುದಾಗಿ ತಿಳಿಸಿದ್ದಳು. ಪುಂಜಾಲಕಟ್ಟೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

 

Related Articles

Back to top button