ಇಸ್ರೇಲ್ ಸಂಘರ್ಷ: ಪ್ಯಾಲೆಸ್ತೀನಿಯರಿಗೆ ಬೆಂಬಲ ಸೂಚಿಸಿದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ

Views: 0
ಕಾರ್ಯಕಾರಿ ಸಮಿತಿಯ ಸಭೆಯಲ್ಲಿ ಸೋಮವಾರ ಕಾಂಗ್ರೆಸ್ ಪಕ್ಷವು ಇಸ್ರೇಲ್ – ಪ್ಯಾಲೆಸ್ತೀನ್ ಹೋರಾಟದ ನಡುವೆ ತಕ್ಷಣದ ಕದನ ವಿರಾಮಕ್ಕೆ ಕರೆ ನೀಡಿತು ಎಂದು ವರದಿ ಮಾಡಿದೆ.
ಕಾಂಗ್ರೆಸ್ ಪಕ್ಷವು “ಪ್ಯಾಲೆಸ್ತೀನ್ ಜನರ ಭೂಮಿ, ಸ್ವ-ಸರ್ಕಾರ, ಘನತೆ ಮತ್ತು ಗೌರವದಿಂದ ಬದುಕುವ ಹಕ್ಕುಗಳಿಗಾಗಿ” ತನ್ನ ಬೆಂಬಲವನ್ನು ಸೂಚಿಸಿದೆ.
ಈ ಕುರಿತು ಹೇಳಿಕೆ ನೀಡಿರುವ ಪಕ್ಷವು ” ಪ್ರಸ್ತುತ ಸಂಘರ್ಷಕ್ಕೆ ಕಾರಣವಾದ ಸಮಸ್ಯೆಗಳು ಸೇರಿದಂತೆ ಎಲ್ಲಾ ಬಾಕಿ ಉಳಿದಿರುವ ವಿಷಯಗಳ ಬಗ್ಗೆ ಮಾತುಕತೆಗಳನ್ನು ಪ್ರಾರಂಭಿಬೇಕು” ಎಂದು ತಿಳಿಸಿದೆ.
ಈ ಕುರಿತು ಮಾತನಾಡಿದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್, ”ಪ್ಯಾಲೆಸ್ತೀನ್ ಜನರ ಕಾನೂನುಬದ್ಧ ಆಕಾಂಕ್ಷೆಗಳನ್ನು ಮಾತುಕತೆಯ ಮೂಲಕ ಪೂರೈಸಬೇಕು ಎಂದು ತಮ್ಮ ಪಕ್ಷವು ಯಾವಾಗಲೂ ನಂಬುತ್ತದೆ. ಇಸ್ರೇಲ್ ಜನರ ಮೇಲಿನ ಕ್ರೂರ ದಾಳಿಯನ್ನು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಖಂಡಿಸುತ್ತದೆ” ಎಂದು ಹೇಳಿದರು.
ಇಸ್ರೇಲ್ ಮತ್ತು ಹಮಾಸ್ ಹೋರಾಟಗಾರರ ಗುಂಪಿನ ನಡುವಿನ ಸಂಘರ್ಷ ಸೋಮವಾರ ಮೂರನೇ ದಿನಕ್ಕೆ ಕಾಲಿಟ್ಟಿದೆ.
ಈ ಬಗ್ಗೆ ಸಭೆಯಲ್ಲಿ ಅಂಗೀಕರಿಸಿದ ನಿರ್ಣಯದಲ್ಲಿ, ಕಳೆದ ಎರಡು ವರ್ಷಗಳಲ್ಲಿ ಸಾವಿರಕ್ಕೂ ಹೆಚ್ಚು ಜನರು ಸಾವನ್ನಪ್ಪಿರುವ ಬಗ್ಗೆ CWC ದುಃಖವನ್ನು ವ್ಯಕ್ತಪಡಿಸುತ್ತದೆ ಎಂದು ಕಾಂಗ್ರೆಸ್ ಹೇಳಿದೆ.
”ಪ್ಯಾಲೆಸ್ತೀನ್ ಜನರ ಭೂಮಿ, ಸ್ವ-ಸರ್ಕಾರ, ಘನತೆ ಮತ್ತು ಗೌರವದಿಂದ ಬದುಕುವ ಹಕ್ಕುಗಳಿಗಾಗಿ ತನ್ನ ಬೆಂಬಲವನ್ನು ಸೂಚಿಸಿದೆ” ಎಂದು ನಿರ್ಣಯವು ಹೇಳಿದೆ.
”ಯಾವುದೇ ರೀತಿಯ ಹಿಂಸಾಚಾರವು ಎಂದಿಗೂ ಯಾವುದೇ ಪರಿಹಾರವನ್ನು ನೀಡುವುದಿಲ್ಲ ಮತ್ತು ಅದು ನಿಲ್ಲಬೇಕು” ಎಂದು ಹೇಳಿದರು.