ಈಶ್ವರಪ್ಪ ಭೇಟಿಯಿಂದ ಸತ್ಯಜಿತ್ ಸುರತ್ಕಲ್ ಮುಂದಿನ ನಡೆಯ ಬಗ್ಗೆ ಕುತೂಹಲ..!

Views: 88
ಮಂಗಳೂರು: ಟಿಕೆಟ್ ಕೈತಪ್ಪಿದ ನೋವಿನಲ್ಲಿರುವ ಸತ್ಯಜಿತ್ ಸುರತ್ಕಲ್ ಸದ್ಯಕ್ಕೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಹಾಗಂತ ಅಸಮಾಧಾನವನ್ನು ಶಿವಮೊಗ್ಗದಲ್ಲಿ ಈಶ್ವರಪ್ಪ ಅವರಿಗೆ ಬೆಂಬಲ ಸೂಚಿಸಿ ತೋರಿಸಿದ್ದಾರೆ. ಈಶ್ವರಪ್ಪ ಅಂತಹ ನಾಯಕರನ್ನು ಬಿಜೆಪಿ ತುಳಿಯುತ್ತಿದೆ ಎಂದು ಮಾದ್ಯಮಗಳ ಮುಂದೆ ಹೇಳಿಕೊಂಡಿದ್ದಾರೆ. ನನ್ನ ಜೊತೆ ಕಾರ್ಯಕರ್ತ ಪಡೆ ಇದ್ದು ನನ್ನ ಸಹಕಾರ ನಿಮಗೆ ಇದೆ ಎಂದು ಹೇಳುವ ಮೂಲಕ ಪರೋಕ್ಷವಾಗಿ ಬಿಜೆಪಿಗೆ ಸಡ್ಡು ಹೊಡೆದಿದ್ದಾರೆ. ಸತ್ಯಜಿತ್ ಸುರತ್ಕಲ್ ಅವರ ಈ ನಡೆ ಸಾಕಷ್ಟು ಕುತೂಹಲ ಕೆರಳಿಸಿದ್ದು, ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಿಂದ ಪಕ್ಷೇತರರಾಗಿ ಸ್ಪರ್ಧೆ ಮಾಡ್ತಾರಾ ಅನ್ನೋ ಸಂಶಯ ಮೂಡಿದೆ.
ಚುನಾವಣೆಯಲ್ಲಿ ತನ್ನ ಮಗನಿಗೆ ಹಾವೇರಿಯಿಂದ ಟಿಕೆಟ್ ಕೊಟ್ಟಿಲ್ಲ ಎಂದು ಆಕ್ರೋಶಗೊಂಡಿರೋ ಕೆ.ಎಸ್.ಈಶ್ವರಪ್ಪ ಪಕ್ಷೇತರರಾಗಿ ಶಿವಮೊಗ್ಗದಿಂದ ಸ್ಪರ್ಧಿಸೋದಿಕ್ಕೆ ಸಿದ್ಧತೆ ಮಾಡಿಕೊಂಡಿದ್ದಾರೆ. ಅವರಿಗೆ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಟಿಕೆಟ್ ವಂಚಿತ ಜಾಗರಣ ವೇದಿಕೆಯ ಸತ್ಯಜಿತ್ ಸುರತ್ಕಲ್ ಅವರು ಬೆಂಬಲ ನೀಡಿದ್ದಾರೆ. ಈಶ್ವರಪ್ಪ ಅವರ ನಿವಾಸಕ್ಕೆ ಭೇಟಿ ನೀಡಿದ ಸತ್ಯಜಿತ್ ಸುರತ್ಕಲ್ ಈಶ್ವರಪ್ಪ ಅವರ ಬೆಂಬಲಕ್ಕೆ ತಾವು ಇರುವುದಾಗಿ ಬರವಸೆ ನೀಡಿದ್ದಾರೆ. ಟಿಕೆಟ್ ಕೈ ತಪ್ಪಿದ್ದಕ್ಕಾಗಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ವಿರುದ್ಧ ಆಕ್ರೋಶಗೊಂಡಿರುವ ಈಶ್ವರಪ್ಪ ಅವರ ಮಗ ಬಿ.ವೈ. ರಾಘವೇಂದ್ರ ಅವರನ್ನು ಸೋಲಿಸುವ ಪಣ ತೊಟ್ಟಿದ್ದಾರೆ