ಜನಮನ

ಈ ಬಾರಿ ಮೇ 14-16ರ ನಡುವೆ ಪೂರ್ವ ಮುಂಗಾರು ಪ್ರವೇಶ

Views: 105

ಕನ್ನಡ ಕರಾವಳಿ ಸುದ್ದಿ: ಈ ಬಾರಿ ಕರ್ನಾಟಕಕ್ಕೆ ಮುಂಗಾರು ಮಳೆಯ ಕೊರತೆಯಾಗಲಿದೆ ಎಂಬ ಆತಂಕಗಳ ನಡುವೆಯೇ, ದೇಶಕ್ಕೆ ಮುಂಗಾರು ಪ್ರವೇಶಕ್ಕೆ ದಿನಾಂಕ ನಿಗದಿಯಾಗಿದೆ. ಈ ನಡುವೆ ಸಾಮಾನ್ಯಕ್ಕಿಂತ ಹೆಚ್ಚಿನ ಮಳೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

ಹವಾಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ, ಮೇ 14-16ರ ನಡುವೆ ದೇಶಕ್ಕೆ ಮುಂಗಾರು ಪ್ರವೇಶವಾಗಲಿದೆ. ಮೇ ತಿಂಗಳಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ಮಳೆಯಾಗುವ ಸಾಧ್ಯತೆಯಿದೆ. ಸದ್ಯ ದೇಶಾದ್ಯಂತವಿರುವ ಉರಿಬಿಸಿಲು ಶೀಘ್ರ ದಲ್ಲಿಯೇ ತಗ್ಗಲಿದೆ. ಅಂಡಮಾನ್ ಮತ್ತು ನಿಕೋಬಾ‌ರ್ ಮೂಲಕ ನೈಋತ್ಯ ಮಾನ್ಸೂನ್ ಆಗಮನ ವಾಗಲಿದೆ ಎಂದು ಮುನೂಚನೆ ನೀಡಲಾಗಿದೆ.

ಮುಂಗಾರು ಪ್ರವೇಶದ ಹೊರತಾಗಿಯೂ ಹಿಮಾಲಯದ ತಪ್ಪಲಿನ ಕೆಲವು ಭಾಗಗಳು, ಪೂರ್ವ ಕರಾವಳಿ ರಾಜ್ಯಗಳು, ಗುಜರಾತ್ ಮತ್ತು ಮಹಾರಾಷ್ಟ್ರಗಳಲ್ಲಿ ಮೇನಲ್ಲಿ ಸಾಮಾ ನ್ಯಕ್ಕಿಂತ ಹೆಚ್ಚಿನ ಬಿಸಿಯಲು ಮುಂದುವರಿಯುವ ಸಾಧ್ಯತೆಯಿದೆ. ದೇಶಾದ್ಯಂತ ಸರಾಸರಿ ಮಳೆ ಸಾಮಾನ್ಯಕ್ಕಿಂತ ಹೆಚ್ಚಾದರೂ, ಪೂರ್ವ, ಈಶಾನ್ಯ ಮತ್ತು ಪೂರ್ವ ಮಧ್ಯ ಭಾರತದ ಕೆಲವು ಭಾಗಗಳಲ್ಲಿ ಸಾಮಾನ್ಯಕ್ಕಿಂತ ಕಡಿಮೆ ಮಳೆಯಾಗಬಹುದು.

ಇನ್ನೊಂದು ವಾರ ಪೂರ್ವ ಮುಂಗಾರು?:

ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಕೆಲಭಾಗದಲ್ಲಿ ಮೂರ್ನಾಲ್ಕು ದಿನಗಳಿಂದ ಆರ್ಭಟಿಸುತ್ತಿರುವ ಪೂರ್ವ ಮುಂಗಾರು ಮಳೆ ಚೇತರಿಕೆಯಾಗಿದ್ದು, ಮುಂದಿನ ಒಂದು ವಾರಗಳ ಕಾಲ ಮುಂದುವರಿಯುವ ಸಾಧ್ಯತೆ ಯಿದೆ. ಈಗಾಗಲೇ ಗರಿಷ್ಠ ತಾಪಮಾನ ಹೆಚ್ಚಾಗಿದ್ದು, ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳಲ್ಲಿ ತೀವ್ರವಾಗಿದೆ.

Related Articles

Back to top button
error: Content is protected !!