ಕೃಷಿ

ಈ ಭಾರಿ ವಾಡಿಕೆಗೂ ಮುನ್ನ 4-5 ದಿನ ಮುಂಚಿತವಾಗಿಯೇ ಮುಂಗಾರು ಪ್ರವೇಶ 

Views: 93

ಕನ್ನಡ ಕರಾವಳಿ ಸುದ್ದಿ: ಸಾಮಾನ್ಯವಾಗಿ ಜೂನ್ 1ರಂದು ನೈರುತ್ಯ ಮಾನ್ಸೂನ್ ಕೇರಳವನ್ನು ಪ್ರವೇಶಿಸುವುದು ವಾಡಿಕೆ. ಆದರೆ ಹಲವು ವರ್ಷಗಳ ಬಳಿಕ ಇದೇ ಮೊದಲ ಬಾರಿಗೆ ಈ ಬಾರಿ 5 ದಿನಗಳು ಮುಂಚಿತವಾಗಿಯೇ ಅಂದರೆ ಮೇ 27ರಂದೇ ನೈರುತ್ಯ ಮಾನ್ಸೂನ್ ಕೇರಳ ಕರಾವಳಿಯನ್ನು ಪ್ರವೇಶಿಸುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಭಾನುವಾರ ತಿಳಿಸಿದೆ.

ನಿರೀಕ್ಷೆಯಂತೆ, ಕೇರಳಕ್ಕೆ ಮಾನ್ಸೂನ್ 27ಕ್ಕೆ ಆಗಮಿಸಿದರೆ, 16 ವರ್ಷಗಳ ಬಳಿಕ ಮೊದಲ ಬಾರಿಗೆ ಭಾರತದ ಮುಖ್ಯ ಭೂಭಾಗಗಳಲ್ಲಿ ನೈರುತ್ಯ ಮಾನ್ಸೂನ್ ಬಹು ಬೇಗನೆ ಆರಂಭವಾದಂತಾಗಲಿದೆ.

ಕೇರಳವನ್ನು ಪ್ರವೇಶಿದ ನಂತರ ಭಾರತದ ಮುಖ್ಯ ಭೂ ಭಾಗಗಳಿಗೆ ಮಳೆ ಆಗಮಿಸುವ ಬಗ್ಗೆ ಅಧಿಕೃತವಾಗಿ ಘೋಷಿಸಲಾಗುತ್ತದೆ. ಸಾಮಾನ್ಯವಾಗಿ ಜೂನ್ 1ಕ್ಕೆ ಕೇರಳಕ್ಕೆ ಆಗಮಿಸುವ ಮುಂಗಾರು ಮಳೆ ಜೂನ್ 8ರ ವೇಳೆಗೆ ಇಡೀ ದೇಶವನ್ನು ಆವರಿಸುತ್ತದೆ. ಸೆಪ್ಟೆಂಬರ್ 17ರ ಸುಮಾರಿಗೆ ವಾಯವ್ಯ ಭಾರತದಿಂದ ಹಿಂದೆ ಸರಿಯಲು ಆರಂಭಿಸಿ, ಅಕ್ಟೋಬರ್ 15ರ ವೇಳೆಗೆ ಸಂಪೂರ್ಣವಾಗಿ ಕೊನೆಗೊಳ್ಳುತ್ತದೆ ಎಂದು ಭೂ ವಿಜ್ಞಾನ ಸಚಿವಾಲಯದ ಕಾರ್ಯದರ್ಶಿ ಎಂ.ರವಿಚಂದ್ರನ್ ಹೇಳಿದ್ದಾರೆ.

Related Articles

Back to top button