ಇತರೆ

ಉಡುಪಿ:ತನ್ನ ಮನೆಗೆ ತಾನೇ ಬೆಂಕಿ ಹಚ್ಚಿದ ವ್ಯಕ್ತಿ 

Views: 120

ಕನ್ನಡ ಕರಾವಳಿ ಸುದ್ದಿ: ಕುಡಿದ ಮತ್ತಿನಲ್ಲಿ ವ್ಯಕ್ತಿಯೊರ್ವ ತನ್ನದೇ ಮನೆಗೆ ತಾನು ಬೆಂಕಿ ಹಚ್ಚಿದ ಘಟನೆ ನಗರದ ಹೊರವಲಯದ ಚಿಟ್ಟಾಡಿಯಲ್ಲಿ ರವಿವಾರ ನಡೆದಿದೆ.

ಕುಡಿದ ಮತ್ತಿನಲ್ಲಿ ವ್ಯಕ್ತಿಯ ರಂಪಾಟ, ವರ್ತನೆ ಎದುರಿಸಲು ಅಸಹಾಯಕರಾದ ಮನೆಯವರು, ಸಮಾಜಸೇವಕ ನಿತ್ಯಾನಂದ ಒಳಕಾಡುವರಲ್ಲಿ ನೆರವಿಗೆ ಬರುವಂತೆ ಕೇಳಿಕೊಂಡಿದ್ದಾರೆ. ತಕ್ಷಣ ಸ್ಥಳಕ್ಕೆ ಬಂದ ಒಳಕಾಡು ಅವರು ಅಗ್ನಿಶಾಮಕ ದಳದವರಿಗೆ ವಿಷಯ ತಿಳಿಸಿದ್ದಾರೆ.

ಘಟನಾ ಸ್ಥಳಕ್ಕೆ ಬಂದ ಅಗ್ನಿಶಾಮಕದಳದವರು ಬೆಂಕಿಯನ್ನು ನಂದಿಸಿ ದೊಡ್ಡ ಪ್ರಮಾಣದಲ್ಲಿ ಆಗಬಹುದಾದ ಅಗ್ನಿದುರಂತವನ್ನು ತಪ್ಪಿಸಿದ್ದಾರೆ. ಬಳಿಕ ಒಳಕಾಡು ಅವರು ಕುಡುಕನ ಮನವೊಲಿಸಿ ಮಧ್ಯವರ್ಜನ ಕೇಂದ್ರಕ್ಕೆ ದಾಖಲು ಮಾಡಿದ್ದಾರೆ.

Related Articles

Back to top button