ಸಾಂಸ್ಕೃತಿಕ

ಉಡುಪಿ:ಪದ್ಮಶಾಲಿ ನೇಕಾರ ಪ್ರತಿಷ್ಠಾನದ ರತ್ನಾಕರ್ ಇಂದ್ರಾಳಿ ಅವರಿಗೆ ಶ್ರೀ ಕೃಷ್ಣಾನುಗೃಹ ಪ್ರಶಸ್ತಿ ಪ್ರಧಾನ 

Views: 112

ಉಡುಪಿ: ಕೈಮಗ್ಗ ಸೀರೆಗಳ ಬ್ರ್ಯಾಂಡ್ ಅಂಬಾಸಿಡರ್ ಕೈಮಗ್ಗ ಸೀರೆಗಳ ಉತ್ಸವದ ಯಶಸ್ಸಿನ ರೂವಾರಿ ರತ್ನಾಕರ ಇಂದ್ರಾಳಿಯವರಿಗೆ ಉಡುಪಿ ಪರ್ಯಾಯ ಶ್ರೀ ಶ್ರೀ ಪುತ್ತಿಗೆ ಸುಗುಣೇಂದ್ರ ಶ್ರೀಪಾದರು ನೀಡುತ್ತಿರುವ ‘ಶ್ರೀ ಕೃಷ್ಣಾನುಗ್ರಹ ಪ್ರಶಸ್ತಿ’ ಪ್ರಧಾನ ಮಾಡಲಾಯಿತು.

ಕೈಮಗ್ಗದ ನೇಕಾರಿಕೆಯ ಅದ್ಭುತ ಕಲಾಕೌಶಲ್ಯವನ್ನು ಪೋಷಿಸಿ ಬೆಳೆಸಲು ನಿರಂತರವಾಗಿ ಶ್ರಮಿಸುತ್ತಾ, ಪುತ್ತಿಗೆ ಮಠದ ಪರ್ಯಾಯ ಮತ್ತು ಶ್ರೀ ಕೃಷ್ಣ ಮಾಸೋತ್ಸವದ ಸಂದರ್ಭದಲ್ಲಿ ರಾಷ್ಟ್ರಮಟ್ಟದ ಕೈಮಗ್ಗ ಸೀರೆಗಳ ಉತ್ಸವ ಕಾರ್ಯಕ್ರಮವನ್ನು ಆಯೋಜಿಸಿ, ಕೈಮಗ್ಗದ ಉದ್ದಿಮೆಗೆ ಮತ್ತು ಶ್ರೀ ಕೃಷ್ಣ ಮಾಸೋತ್ಸವಕ್ಕೆ ವಿಶೇಷವಾದ ಮೆರುಗನ್ನು ನೀಡಿದ ಉಡುಪಿ ಪ್ರಾಥಮಿಕ ನೇಕಾರರ ಸೇವಾ ಸಹಕಾರಿ ಸಂಘ ಮತ್ತು ಪದ್ಮಶಾಲಿ ನೇಕಾರ ಪ್ರತಿಷ್ಠಾನದ ಅಧ್ಯಕ್ಷರಾದ ರತ್ನಾಕರ್ ಇಂದ್ರಾಳಿಯವರಿಗೆ ಪರ್ಯಾಯ ಪುತ್ತಿಗೆ ಶ್ರೀಗಳು ಶ್ರೀಕೃಷ್ಣ ಜಯಂತಿಯ ಅಂಗವಾಗಿ ಶ್ರೀ ಕೃಷ್ಣಗೀತಾನುಗ್ರಹ ಪ್ರಶಸ್ತಿಯನ್ನು ನೀಡಿ ಗೌರವಿಸಿದರು.

Related Articles

Back to top button