ಕರಾವಳಿ

ಉಡುಪಿ:ಪರೀಕ್ಷಾ ಭೀತಿಯಿಂದ ವಿದ್ಯಾರ್ಥಿ 6ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ 

Views: 111

ಉಡುಪಿ,: ಪರೀಕ್ಷಾ ಭೀತಿಯಿಂದ ವಿದ್ಯಾರ್ಥಿಯೋರ್ವ ಕಟ್ಟಡದ 6ನೇ ಮಹಡಿಯಿಂದ ಜಿಗಿದು ಸಾವಿಗೆ ಶರಣಾಗಿರುವ ಘಟನೆ ಉಡುಪಿ ಜಿಲ್ಲೆಯ ಮಣಿಪಾಲದ ಮಾಹೆ ವಿವಿಯಲ್ಲಿ ನಡೆದಿದೆ. ಬಿಹಾರ ಮೂಲದ ಸತ್ಯಂ ಸುಮನ್(19) ಮೃತ ವಿದ್ಯಾರ್ಥಿ ಎಂದು ಎಂದು ಗುರುತಿಸಲಾಗಿದೆ.

ಸತ್ಯಂ ಸುಮನ್ ಮಣಿಪಾಲ ಮಾಹೆ ವಿವಿಯ ಎಂಸಿಎಚ್‌ಪಿ ವಿಭಾಗದ ದ್ವಿತೀಯ ವರ್ಷದ ವಿದ್ಯಾರ್ಥಿಯಾಗಿದ್ದು, ಪರೀಕ್ಷೆ ನಡೆಯುತ್ತಿದ್ದ ವೇಳೆಯಲ್ಲಿ ಕಟ್ಟಡದ ಜಿಗಿದು ಸಾವಿಗೆ ಶರಣಾಗಿದ್ದಾನೆ. ಸತ್ಯಂ ಸುಮನ್ ಕಟ್ಟಡದಿಂದ ಜಿಗಿಯುತ್ತಿದ್ದಂತೆ ಇತರ ವಿದ್ಯಾರ್ಥಿಗಳು ಭಯಗೊಂಡಿದ್ದು, ವಿದ್ಯಾರ್ಥಿಗಳು ಆತಂಕದಿಂದ ಅತ್ತಿತ್ತ ಓಡಾಡುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಸತ್ಯಂ ಸುಮನ್ ಎಂಸಿಎಚ್‌ಪಿ ವಿಭಾಗದ ದ್ವಿತೀಯ ವರ್ಷದ ವಿದ್ಯಾರ್ಥಿಯಾಗಿದ್ದು, ಪರೀಕ್ಷೆಯಲ್ಲಿ ನಕಲು ಮಾಡಿ ಸಿಕ್ಕಿಬಿದ್ದ ಹಿನ್ನಲೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೊಬೈಲ್ ಮೂಲಕ ಕಾಪಿ ಮಾಡುವ ವೇಳೆ ಸತ್ಯಂ ಸುಮನ್ ಸಿಕ್ಕಿಬಿದ್ದಿದ್ದಾನೆ. ಸಿಕ್ಕಿಬಿದ್ದ ಹಿನ್ನೆಲೆಯಲ್ಲಿ ಪರೀಕ್ಷಾ ಕೊಠಡಿಯಿಂದ ಆತನನ್ನು ಪರೀಕ್ಷಾ ಉಸ್ತುವಾರಿ ಹೊರದಬ್ಬಿದ್ದಾರೆ. ಇದರಿಂದ ಮನನೊಂದು ಆತ ಪರೀಕ್ಷೆ ನಡೆಯುತ್ತಿದ್ದ ವೇಳೆಯಲ್ಲಿ ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನುವ ಆರೋಪಗಳು ಸಹ ಕೇಳಿಬರುತ್ತಿದೆ.

ವಿದ್ಯಾರ್ಥಿ ಕಾಲೇಜು ಕಟ್ಟಡದಿಂದ ಬಿದ್ದು ಸಾವನ್ನಪ್ಪಿದ ಪ್ರಕರಣ ಸಂಬಂಧ ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Related Articles

Back to top button