ಕರಾವಳಿ

ಉಡುಪಿ:ಮೀನು ಕದ್ದ ಆರೋಪ, ಮಹಿಳೆಯನ್ನು ಮರಕ್ಕೆ ಕಟ್ಟಿ ಹಾಕಿ ಅಮಾನುಷವಾಗಿ ಹಲ್ಲೆ

Views: 271

ಕನ್ನಡ ಕರಾವಳಿ ಸುದ್ದಿ: ಬೆಲೆಬಾಳುವ ಮೀನು ಕದ್ದಿರುವ ಆರೋಪದಲ್ಲಿ ಮಹಿಳೆಯನ್ನು ಮರಕ್ಕೆ ಕಟ್ಟಿಹಾಕಿ ಹಲ್ಲೆ ನಡೆಸಿದ ಘಟನೆ ಉಡುಪಿಯ ಮಲ್ಪೆ ಬಂದರಿನಲ್ಲಿ ನಡದಿದೆ.

ಸಿಗಡಿ ಮೀನುಗಳನ್ನು ಕದ್ದಿರುವ ಮಹಿಳೆಯನ್ನು ಮೊದಲಿಗೆ ಮೀನುಗಾರ ಮಹಿಳೆಯೊಬ್ಬರು ತರಾಟೆಗೆ ತೆಗೆದುಕೊಂಡಿದ್ದಾರೆ. ಈ ವೇಳೆ ಮಹಿಳೆಗೆ ಕಪಾಳಮೋಕ್ಷ ಮಾಡಿ ಕದ್ದ ಮೀನು ತೋರಿಸುವಂತೆ ಒತ್ತಾಯಿಸಿದ್ದಾರೆ. ಆದರೆ ತಾನು ಮೀನು ಕದ್ದಿಲ್ಲ ಅಂತ ವಾದ ಮಾಡಿದ ಆಕೆಯನ್ನು ಮರಕ್ಕೆ ಕಟ್ಟಿಹಾಕಿದ ಜನರು ತೀವ್ರ ವಿಚಾರಣೆ ಮಾಡಿದ್ದಾರೆ.

ಸ್ಥಳೀಯರಾದ ಲಕ್ಷ್ಮೀಬಾಯಿ, ಸುಂದರ್, ಶಿಲ್ಪಾ ಹಾಗೂ ಇನ್ನೋರ್ವ ಎಂದು ಗುರುತಿಸಲಾಗಿದೆ.

ಮಾ.18ರಂದು ವಿಜಯನಗರ ಜಿಲ್ಲೆ ಮೂಲದ ಮಹಿಳೆಗೆ ಹಲ್ಲೆ ನಡೆಸುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಈ ಬಗ್ಗೆ ತನಿಖೆ ನಡೆಸಿದ ಮಲ್ಪೆ ಪೊಲೀಸರು, ಹಲ್ಲೆಗೊಳಗಾದ ಮಹಿಳೆ ನೀಡಿದ ದೂರಿನಂತೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಈ ಮಹಿಳೆ ಬಂದರಿನಲ್ಲಿ ಮೀನು ಕದ್ದಿದ್ದಾರೆಂದು ಆರೋಪಿಸಿ ಲಕ್ಷ್ಮೀಬಾಯಿ ಎಂಬವರು ಹಲ್ಲೆ ಮಾಡಿದ್ದಾರೆ. ನಂತರ ಸ್ಥಳೀಯರು ಸೇರಿ, ಆ ಮಹಿಳೆಯನ್ನು ಮರಕ್ಕೆ ಕಟ್ಟಿ ಹಾಕಿ ಹಲ್ಲೆ ಮಾಡುತ್ತಿರುವುದು ವಿಡಿಯೋದಲ್ಲಿ ಕಂಡುಬಂದಿದೆ. ಈ ಬಗ್ಗೆ ಮಹಿಳೆ ನೀಡಿದ ದೂರಿನಂತೆ ಮಲ್ಪೆ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಎಸ್ಪಿ ಡಾ.ಕೆ.ಅರಣ್ ಹೇಳಿದ್ದಾರೆ.

ವಿಡಿಯೋವನ್ನು ಪರಿಶೀಲಿಸಿ, ಅದರಲ್ಲಿ ಮಹಿಳೆಗೆ ಹಲ್ಲೆ ನಡೆಸಿರುವ ನಾಲ್ವರನ್ನು ಬಂಧಿಸಲಾಗಿದೆ.

Related Articles

Back to top button