ಶಿಕ್ಷಣ

ಉಡುಪಿ ಅದಮಾರು ಪೂರ್ಣಪ್ರಜ್ಞ ಪದವಿ ಪೂರ್ವ ಕಾಲೇಜು: ವಾರ್ಷಿಕೋತ್ಸವ ಸಮಾರಂಭ

Views: 20

ಉಡುಪಿ: ಅದಮಾರು ಪೂರ್ಣಪ್ರಜ್ಞ ಪದವಿಪೂರ್ವ ಕಾಲೇಜು ಹಾಗೂ ಪೂರ್ಣಪ್ರಜ್ಞ ಕನ್ನಡ ಮಾಧ್ಯಮ ಪ್ರೌಢಶಾಲೆಗಳ ಈ ಶೈಕ್ಷಣಿಕ ವರ್ಷದ ವಾರ್ಷಿಕೋತ್ಸವ ಅದ್ಧೂರಿಯಾಗಿ ಸಂಭ್ರಮದಿಂದ ನಡೆಯಿತು.

ಉಡುಪಿ ಅದಮಾರು ಮಠ ಶಿಕ್ಷಣ ಮಂಡಳಿಯ ಅಧ್ಯಕ್ಷರೂ, ಅದಮಾರು ಮಠಾಧೀಶರು ಆದ ಶ್ರೀ ಈಶಪ್ರಿಯ ತೀರ್ಥ ಶ್ರೀಪಾದರು ಜ್ಯೋತಿ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು.

ಶ್ರೀಪಾದರು ಮಾತನಾಡುತ್ತಾ, ವಿದ್ಯಾರ್ಥಿಗಳು ನಿರಂತರ ಸಾಧನೆ ಮಾಡುವತ್ತ ಗಮನಹರಿ ಅತ್ಯುತ್ತಮ ಅಂಕಗಳಿಸಬೇಕು. ಜೊತೆಗೆ ನಮ್ಮ ಸಂಸ್ಕಾರ ಸಂಸ್ಕೃತಿ ಅರಿತುಕೊಳ್ಳಬೇಕು ಹಾಗೂ ವಿಶೇಷವಾದ ಸಾಧನೆಗೆ ಒತ್ತು ನೀಡಬೇಕು. ನಮ್ಮ ಮಕ್ಕಳು ಸಮಾಜದಲ್ಲಿ ಉತ್ತಮ ಪ್ರಜೆಗಳಾಗಿ ಸಮಾಜಕ್ಕೆ ಅತ್ಯುತ್ತಮ ಕೊಡುಗೆ ನೀಡಿ ಎಂದು ಅನುಗ್ರಹ ಸಂದೇಶ ನೀಡಿದರು.

ಅದಮಾರು ಪೂರ್ಣಪ್ರಜ್ಞ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ಪ್ರತಿನಿಧಿಯಾದ ಪ್ರೊ ನಿತ್ಯಾನಂದ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿ, ಅದಮಾರು ಪೂರ್ಣಪ್ರಜ್ಞ ಶಿಕ್ಷಣ ಸಂಸ್ಥೆಯಲ್ಲಿ ಕಲಿತವರು ಇಂದು ದೇಶದ ಅನೇಕ ಕಡೆ, ಉತ್ತಮ ಸ್ಥಾನದಲ್ಲಿದ್ದಾರೆ ಅವರು ಸಂಸ್ಥೆಯ ಮೇಲೆ ಅಪಾರ ಪ್ರೀತಿ ಹಾಗೂ ಗೌರವ ಹೊಂದಿರುತ್ತಾರೆ ನೀವು ಕೂಡ ಉತ್ತಮವಾಗಿ ಕಲಿತು ಶ್ರೇಷ್ಠ ಸ್ಥಾನವನ್ನು ಪಡೆದು ವಿದ್ಯಾಸಂಸ್ಥೆಯ ಕೀರ್ತಿ ಬೆಳಗಿಸಿರಿ ಎಂದರು.

ಪೂರ್ಣಪ್ರಜ್ಞ ಪದವಿಪೂರ್ವ ಕಾಲೇಜು ಅದಮಾರು ಇದರ ಪ್ರಾಂಶುಪಾಲ ಸಂಜೀವ ನಾಯ್ಕ, ಪೂರ್ಣಪ್ರಜ್ಞ ಕನ್ನಡ ಮಾಧ್ಯಮ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಶ್ರೀಕಾಂತ ರಾವ್ ವಾರ್ಷಿಕ ವರದಿ ವಾಚಿಸಿದರು

ಈ ಸಂದರ್ಭದಲ್ಲಿ ಪೂಜ್ಯ ಸ್ವಾಮೀಜಿಯವರು 2024 ಮಾರ್ಚ್ ತಿಂಗಳ ಎಸೆಸೆಲ್ಸಿ ಪಬ್ಲಿಕ್ ಪರೀಕ್ಷೆಯಲ್ಲಿ ಶೇಕಡ 90 ಕ್ಕಿಂತ ಹೆಚ್ಚು ಅಂಕ ಗಳಿಸಿ ಅದಮಾರು ಪೂರ್ಣಪ್ರಜ್ಞಕ್ಕೆ ಸೇರ್ಪಡೆಗೊಂಡ 40 ಪ್ರಥಮ ಪಿಯುಸಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಒಟ್ಟು 2,42,500 ನಗದು ಬಹುಮಾನ ನೀಡಿದರು.ಅಲ್ಲದೆ ಸಾಂಸ್ಕೃತಿಕ ಹಾಗು ಕ್ರೀಡೆಯಲ್ಲಿ ಚಾಂಪಿಯನ್ ಆದ ವಿದ್ಯಾರ್ಥಿಗಳಿಗೆ ಟ್ರೋಫಿಗಳನ್ನು ವಿತರಿಸಲಾಯಿತು ಈ ಸಮಾರಂಭದಲ್ಲಿ ಪೂರ್ಣಪ್ರಜ್ಞ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಮಂಜುನಾಥ ಎ ವಿ ಉಪಸ್ಥಿತರಿದ್ದರು.

ವಿದ್ಯಾರ್ಥಿ ಓಂಕಾರ್ ಸ್ವಾಗತಿಸಿ, ಪ್ರಥಮ್ ವಂದಿಸಿದರು. ದಾರ್ಶಿಕ್ ಕಾರ್ಯಕ್ರಮ ನಿರ್ವಹಿಸಿದರು.

ಸಭಾ ಕಾರ್ಯಕ್ರಮದ ಬಳಿಕ ಕಾಲೇಜು ಹಾಗೂ ಹೈಸ್ಕೂಲ್ ವಿದ್ಯಾರ್ಥಿಗಳಿಂದ ವಿವಿಧ ಮನೋರಂಜನಾ ಕಾರ್ಯಕ್ರಮಗಳು ಜರುಗಿದವು.

Related Articles

Back to top button