ಜನಮನ

ಉಡುಪಿ : ಉಡುಪಿಗೆ ಹೋಗಿ ಬರುವುದಾಗಿ ಹೇಳಿ ಮನೆಗೆ ಬಾರದ  ಮೂಡುಬೆಳ್ಳೆ ಯುವತಿಯ ಶವ  ಪತ್ತೆ

Views: 0

ಶಿರ್ವ: ಉಡುಪಿಗೆ ಹೋಗಿ ಬರುವುದಾಗಿ ತಿಳಿಸಿ ವಾಪಾಸು ಮನೆಗೆ ಬಾರದೆ ಕಾಣೆಯಾಗಿದ್ದ ಯವತಿಯ ಶವ ಶಿರ್ವ ಪೊಲೀಸ್‌ ಠಾಣಾ ವ್ಯಾಪ್ತಿಯ ಪಡುಬೆಳ್ಳೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಮೀಪದ ಸೇತುವೆಯ ಬಳಿ ಪಾಪನಾಶಿನಿ ನದಿಯ ಗುಂಡಿಯಲ್ಲಿ ಆ.13ರ ಶುಕ್ರವಾರ ಪತ್ತೆಯಾಗಿದೆ

ಮೂಡುಬೆಳ್ಳೆ ಕೊಂಗಿಬೈಲು ನಿವಾಸಿ ಸದಾಶಿವ ಪೂಜಾರಿ ಅವರ ಪುತ್ರಿ ವಿನಿತಾ (22) ಅ. 9ರಂದು ಮಧ್ಯಾಹ್ನ 3 ಗಂಟೆಗೆ ತನ್ನ ಮನೆಯಿಂದ ಹೋದವರು ಕಾಣೆಯಾದ ಬಗ್ಗೆ ಶಿರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಬಿ.ಕಾಂ. ಪದವೀಧರೆಯಾಗಿದ್ದ ಆಕೆ ಉಡುಪಿ ಎಂಜಿಎಂ ಕಾಲೇಜ್‌ ಬಳಿಯ ಎಲೆಕ್ಟ್ರಿಕಲ್‌ ಬೈಕ್‌ ಶೋರೂಂನಲ್ಲಿ ಸುಮಾರು 4 ತಿಂಗಳಿನಿಂದ ಕೆಲಸ ಮಾಡಿಕೊಂಡಿದ್ದು, ವಾರದ ಹಿಂದೆ ಕೆಲಸಬಿಟ್ಟಿದ್ದರು. ಮಾನಸಿಕವಾಗಿ ನೊಂದಿದ್ದ ಈಕೆ ಸೇತುವೆಯಿಂದ ಹಾರಿ ಆತ್ಮಹತ್ಯೆ ಮಾಡಿರಬೇಕೆಂದು ಶಂಕಿಸಲಾಗಿದ್ದು, ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಮಲ್ಪೆಯ ಮುಳುಗು ತಜ್ಞ ಈಶ್ವರ್‌ ಮಲ್ಪೆ ಕೊಳೆತ ಶವವನ್ನು ನದಿಯಿಂದ ಮೇಲಕ್ಕೆತ್ತಿದ್ದು, ಮರಣೋತ್ತರ ಶವ ಪರೀಕ್ಷೆ ನಡೆಸಲು ಮಣಿಪಾಲ ಕೆಎಂಸಿ ಆಸ್ಪತ್ರೆಗೆ ಸಾಗಿಸಲಾಗಿದೆ.

Related Articles

Back to top button
error: Content is protected !!