ಸಾಂಸ್ಕೃತಿಕ
ಉಡುಪಿ: ಕಾಮಿಡಿ ಕಿಲಾಡಿಗಳು ಖ್ಯಾತಿಯ ಕಲಾವಿದ ರಾಕೇಶ್ ಪೂಜಾರಿ ಕುಸಿದು ಬಿದ್ದು ನಿಧನ

Views: 322
ಕನ್ನಡ ಕರಾವಳಿ ಸುದ್ದಿ: ಕಾಮಿಡಿ ಕಿಲಾಡಿಗಳು ಖ್ಯಾತಿಯ ಮಲ್ಪೆ ರಾಕೇಶ್ ಪೂಜಾರಿ (33) ಕುಸಿದು ಬಿದ್ದು ಭಾನುವಾರ ಮೃತಪಟ್ಟಿದ್ದಾರೆ.
ಕಾರ್ಕಳದ ನಿಟ್ಟೆ ಸಮೀಪ ನಡೆದ ಮೆಹಂದಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ವೇಳೆ ಅವರು ಕುಸಿದುಬಿದ್ದರು. ಕೂಡಲೇ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಅಷ್ಟರಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಉಡುಪಿಯ ರಾಕೇಶ್ ಅವರು ಝೀ ಕನ್ನಡ ವಾಹಿನಿಯ ಕಾಮಿಡಿ ಕಿಲಾಡಿಗಳು ಸೀಸನ್ ಎರಡರ ರನ್ನರ್ ಅಪ್ ತಂಡದಲ್ಲಿದ್ದ ಅವರು ಅನಂತರ ಹಲವು ತುಳು, ಕನ್ನಡ ಚಿತ್ರಗಳಲ್ಲಿ ನಟಿಸಿದ್ದರು.
ರಿಯಾಲಿಟಿ ಶೋ ಮಾತ್ರವಲ್ಲದೆ ಜೀ ಕನ್ನಡದಲ್ಲಿ ಪ್ರಸಾರವಾಗುತ್ತಿದ್ದ ಹಿಟ್ಲರ್ ಕಲ್ಯಾಣ ಧಾರಾವಾಹಿಯಲ್ಲಿಯೂ ರಾಕೇಶ್ ನಟಿಸಿದ್ದರು. ತಮ್ಮ ಹಾಸ್ಯ ಚಟಾಕಿಯಿಂದಲೇ ಕನ್ನಡಿಗರ ಮನಗೆದ್ದಿದ್ದರು.