ಇತರೆ
ಉಡುಪಿ: ಕಾಲೇಜಿನ ಪಿಯುಸಿ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ

Views: 184
ಕನ್ನಡ ಕರಾವಳಿ ಸುದ್ದಿ: ಉಡುಪಿ ಜಿಲ್ಲೆಯ ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪಿಯು ಕಾಲೇಜಿನ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ ಕೊಡವೂರು ಗ್ರಾಮದ ನಿವಾಸಿ ಮೇಘಾ (17)
ಕಿದಿಯೂರು ಶ್ಯಾಮಿಲಿ ಪಿಯು ಕಾಲೇಜಿನಲ್ಲಿ ವಾಣಿಜ್ಯ ವಿಭಾಗದಲ್ಲಿ ಪ್ರಥಮ ಪಿಯುಸಿ ವಿದ್ಯಾಭ್ಯಾಸ ಮಾಡಿಕೊಂಡಿದ್ದು, ಕಳೆದ ಒಂದು ವರ್ಷದಿಂದ ಪೀಡ್ಸ್ ಖಾಯಿಲೆಯಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ಕೊಡಿಸಲಾಗಿದೆ. ಗುಣಮುಖಳಾಗಿದ್ದು, ಮನೆಯ ಎದುರು ಇರುವ ಸ್ನಾನಗೃಹದ ತಗಡು ಶೀಟಿನ ಮಾಡಿಗೆ ಅಳವಡಿಸಿದ ಕಬ್ಬಿಣದ ರಾಡ್‌ಗೆ ಚೂಡಿದಾರ ಶಾಲನ್ನು ಕಟ್ಟಿ ಕುತ್ತಿಗೆಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ತಿಳಿದುಬಂದಿದೆ.
ಮಲ್ಪೆ ಪೊಲೀಸ್ ಠಾಣೆಯಲ್ಲಿ ಆತ್ಮಹತ್ಯೆ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.






