ಆರೋಗ್ಯ

ಉಡುಪಿ: ಕುಂದಾಪುರಕ್ಕೂ ಬಂತು ಮಂಗನ ಕಾಯಿಲೆ!

Views: 175

ಕುಂದಾಪುರ ತಾಲೂಕಿನ ವಂಡ್ಸೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ 58 ವರ್ಷದ ಮಹಿಳೆಗೆ ಮಂಗನ ಕಾಯಿಲೆ ದೃಢಪಟ್ಟಿದೆ. ಅವರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮಂಗನಕಾಯಿಲೆ (ಕೆಎಫ್‌ಡಿ) ಪ್ರಕರಣಗಳು ಹೆಚ್ಚಾಗುತ್ತಿದ್ದು, ಶುಕ್ರವಾರ ಶಿವಮೊಗ್ಗದಲ್ಲಿ 1 ಚಿಕ್ಕಮಗಳೂರು 4  ಉಡುಪಿಯಲ್ಲಿ 1 ಪಾಸಿಟಿವ್ ದಾಖಲಾಗಿದೆ.

ಉಡುಪಿಯಲ್ಲಿ ಈ ವರ್ಷದ ಮೊದಲ ಪ್ರಕರಣ ಇದಾಗಿದೆ. ಈವರೆಗೆ 117 ಮಂದಿಗೆ ಪಾಸಿಟಿವ್ ಬಂದಿದ್ದು, 82 ಮಂದಿ ಗುಣಮುಖರಾಗಿ ಮೂವರು ಮೃತಪಟ್ಟಿದ್ದಾರೆ. 19 ಸಕ್ರಿಯ ಪ್ರಕರಣಗಳಿವೆ.ಕುಂದಾಪುರ ತಾಲೂಕಿನ ವಂಡ್ಸೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ 58 ವರ್ಷದ ಮಹಿಳೆಗೆ ಮಂಗನ ಕಾಯಿಲೆ ದೃಢಪಟ್ಟಿದೆ. ಅವರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಅವರಿಗೆ ಕೆಎಫ್‌ಡಿ ಸೋಂಕು ಹೇಗೆ ತಗಲಿತು ?  ಈ ಭಾಗದ ಆಸು ಪಾಸಿನಲ್ಲಿ ತಪಾಸಣೆ ನಡೆಸಲಾಗುತ್ತಿದೆ. ಕುಂದಾಪುರ ಭಾಗದಲ್ಲಿ ಹೆಚ್ಚಿನ ತಪಾಸಣೆ ಮಾಡಲಾಗುತ್ತಿದೆ. 2019 ರಲ್ಲಿ ಒಂದು ಪ್ರಕರಣ ಕಂಡುಬಂದಿದ್ದು ಆ ಬಳಿಕ ಯಾವುದೇ ಪ್ರಕರಣಗಳು ಕಂಡುಬಂದಿಲ್ಲ ಎಂದು ಉಡುಪಿ ಜಿಲ್ಲಾ ಆರೋಗ್ಯ ಅಧಿಕಾರಿ ಡಾ. ಪಿ ಐ ಗಡಾದ್ ತಿಳಿಸಿದ್ದಾರೆ

Related Articles

Back to top button