ಕರಾವಳಿ
ಉಡುಪಿ: ಕೋಡಿಬೆಂಗ್ರೆ ಡೆಲ್ಟಾ ಬೀಚ್’ನಲ್ಲಿ ಬ್ಯಾಂಕ್ ಉದ್ಯೋಗಿ ನೀರು ಪಾಲು

Views: 100
ಉಡುಪಿ, : ಸ್ನೇಹಿತರೊಂದಿಗೆ ಪ್ರವಾಸಕ್ಕೆ ಬಂದಿದ್ದ ವ್ಯಕ್ತಿಯೊಬ್ಬರು ಕೋಡಿ ಬೆಂಗ್ರೆಯ ಡೆಲ್ಟಾ ಬೀಚ್‌ನ ಸಮುದ್ರದಲ್ಲಿ ಕೊಚ್ಚಿಕೊಂಡು ಹೋಗಿ ನಾಪತ್ತೆಯಾಗಿರುವ ಬಗ್ಗೆ ವರದಿಯಾಗಿದೆ.
ಬೆಂಗಳೂರಿನ ಬ್ಯಾಂಕ್ ಉದ್ಯೋಗಿ ನಿತೀನ್(35) ನಾಪತ್ತೆಯಾದ ಪ್ರವಾಸಿಗ. ರಜೆಯ ಹಿನ್ನೆಲೆಯಲ್ಲಿ ಇಬ್ಬರು ಸ್ನೇಹಿತರೊಂದಿಗೆ ಉಡುಪಿಗೆ ಬಂದಿದ್ದ ಇವರು, ಶನಿವಾರ ಮಧ್ಯಾಹ್ನ ಡೆಲ್ಟಾ ಬೀಚ್‌ಗೆ ತೆರಳಿದ್ದರೆನ್ನಲಾಗಿದೆ.
ಅಲ್ಲಿ ಸಮುದ್ರದ ನೀರಿನಲ್ಲಿ ಆಡುತ್ತಿರುವಾಗ ನಿತೀನ್ ಅಲೆಗಳೊಂದಿಗೆ ಕೊಚ್ಚಿ ಕೊಂಡು ಹೋಗಿ ನಾಪತ್ತೆಯಾಗಿದ್ದಾರೆ. ಈ ಬಗ್ಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ