ರಾಜಕೀಯ
ಉಡುಪಿ-ಚಿಕ್ಕಮಗಳೂರು: ಜಯಪ್ರಕಾಶ್ ಹೆಗ್ಡೆ, ದಕ್ಷಿಣ ಕನ್ನಡ :ಆರ್.ಪದ್ಮರಾಜ್ ಅಧಿಕೃತ ಘೋಷಣೆ ಬಾಕಿ..!

Views: 31
ಇತ್ತೀಚೆಗೆ ಕಾಂಗ್ರೆಸ್ ಪಕ್ಷಕ್ಕೆ ಸೇರಿರುವ ಜಯಪ್ರಕಾಶ್ ಹೆಗ್ಡೆಯವರನ್ನು ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಿದೆ
ಕುತೂಹಲ ಮೂಡಿಸಿದ್ದ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸ್ಥಾನಕ್ಕೆ ಯಾರನ್ನು ಕಾಂಗ್ರೆಸ್ ಪಕ್ಷ ಆಯ್ಕೆ ಮಾಡುತ್ತದೆ ಎಂಬ ಪ್ರಶ್ನೆಗೆ ಇದೀಗ ತೆರೆ ಬಿದ್ದಿದೆ. ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಪದ್ಮರಾಜ್ ರಾಮಯ್ಯ ಅವರನ್ನು ಆಯ್ಕೆ ಮಾಡಲಾಗಿದೆ.
ಬಹುತೇಕ ಎಲ್ಲಾ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಫೈನಲ್ ಮಾಡಿದ್ದು, ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬುಧವಾರ ಅಧಿಕೃತವಾಗಿ ಬಿಡುಗಡೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ದೆಹಲಿಯಲ್ಲಿ ತಿಳಿಸಿದ್ದಾರೆ.