Views: 438
ಕನ್ನಡ ಕರಾವಳಿ ಸುದ್ದಿ: ಕರ್ನಾಟಕ ರಾಜ್ಯ ಗ್ರೇಡ್ 1 ದೈಹಿಕ ಶಿಕ್ಷಣ ಶಿಕ್ಷಕರ ಸಂಘ (ರಿ) ಬೆಂಗಳೂರು ಇದರ ಉಡುಪಿ ಜಿಲ್ಲಾಧ್ಯಕ್ಷರಾಗಿ ಕುಸುಮಾಕರ ಶೆಟ್ಟಿ ಆಯ್ಕೆಯಾಗಿದ್ದಾರೆ.
ಸರ್ಕಾರದಿಂದ ಮಾನ್ಯತೆ ಪಡೆದ ಕರ್ನಾಟಕ ರಾಜ್ಯ ಗ್ರೇಡ್ 1 ದೈಹಿಕ ಶಿಕ್ಷಣ ಶಿಕ್ಷಕರ ಸಂಘ (ರಿ.) ಬೆಂಗಳೂರು ಈ ಸಂಘದ ಬೈಲಾ ನಿಯಮಾವಳಿಯನ್ವಯ ಉಡುಪಿ ಜಿಲ್ಲೆಗೆ ಮುಂದಿನ ನಾಲ್ಕು ವರ್ಷಗಳ ಅವಧಿಗೆ ಜಿಲ್ಲಾ ಅಧ್ಯಕ್ಷರಾಗಿ ಕುಂದಾಪುರ ಯುವಜನ ಸೇವಾ ಕ್ರೀಡಾ ಅಧಿಕಾರಿ ಹಾಗೂ ವಕ್ವಾಡಿ ಸರಕಾರಿ ಪ್ರೌಢಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಕುಸುಮಾಕರ ಶೆಟ್ಟಿ ಇವರು ಆಯ್ಕೆಯಾಗಿರುತ್ತಾರೆ.
ಉಡುಪಿ ಜಿಲ್ಲೆಯ ಚುನಾವಣಾ ಅಧಿಕಾರಿಯಾಗಿ ಅರುಣ್ ಕುಮಾರ್ ಶೆಟ್ಟಿ ಸಹಾಯಕ ನಿರ್ದೇಶಕರು ಅಕ್ಷರ ದಾಸೋಹ ಕುಂದಾಪುರ ಇವರು ಚುನಾವಣಾ ನಿಯಮಾವಳಿ ಪ್ರಕಾರ ಚುನಾವಣಾ ಪ್ರಕ್ರಿಯೆಯನ್ನು ನಡೆಸಿಕೊಟ್ಟು ಪದಾಧಿಕಾರಿಗಳಿಗೆ ಪ್ರಮಾಣ ಪತ್ರ ವಿತರಿಸಿದರು.
ಉಪಾಧ್ಯಕ್ಷರಾಗಿ ಕೃಷ್ಣ ನಾಯ್ಕ ದೈಹಿಕ ಶಿಕ್ಷಣ ಶಿಕ್ಷಕರು ಸರಕಾರಿ ಪ್ರೌಢಶಾಲೆ ನಾಲ್ಕುರು ಬ್ರಹ್ಮಾವರ.
ಪ್ರಧಾನ ಕಾರ್ಯದರ್ಶಿಯಾಗಿ ಪ್ರಸಾದ್ ಸುವರ್ಣ ದೈಹಿಕ ಶಿಕ್ಷಣ ಶಿಕ್ಷಕರು ಸರಕಾರಿ ಪ್ರೌಢಶಾಲೆ ಒಳಕಾಡು ಉಡುಪಿ.
ಖಜಾಂಚಿಯಾಗಿ ರಾಘವೇಂದ್ರ ಶೆಟ್ಟಿ, ದೈಹಿಕ ಶಿಕ್ಷಣ ಶಿಕ್ಷಕರು ಸರಕಾರಿ ಪ್ರೌಢಶಾಲೆ ಚಿತ್ತೂರು ಬೈಂದೂರು.
ಸಂಘಟನಾ ಕಾರ್ಯದರ್ಶಿಯಾಗಿ ಸುಧಾಕರ ಶೆಟ್ಟಿ, ದೈಹಿಕ ಶಿಕ್ಷಣ ಶಿಕ್ಷಕರು ಸರಕಾರಿ ಪ್ರೌಢಶಾಲೆ ಬೇಳೂರು ಕುಂದಾಪುರ.
ಜಂಟಿ ಕಾರ್ಯದರ್ಶಿಯಾಗಿ ಪ್ರವೀಣ್ ಶೆಟ್ಟಿ ದೈಹಿಕ ಶಿಕ್ಷಣ ಶಿಕ್ಷಕರು ಸರಕಾರಿ ಪ್ರೌಢಶಾಲೆ, ಹೈಕಾಡಿ ಬ್ರಹ್ಮಾವರ. ಇವರು ಜಿಲ್ಲಾ ಪದಾಧಿಕಾರಿಗಳಾಗಿ ಆಯ್ಕೆಗೊಂಡಿರುತ್ತಾರೆ.