ಇತರೆ

ಉಡುಪಿ: ಮಲ್ಪೆ ಶೌಚಾಲಯದಲ್ಲಿ ನವಜಾತ ಶಿಶುವಿನ ಮೃತದೇಹ ಪತ್ತೆ

Views: 107

ಕನ್ನಡ ಕರಾವಳಿ ಸುದ್ದಿ: ಮಲ್ಪೆ ಜಾಮೀಯಾ ಮಸೀದಿಯ ಶೌಚಾಲಯದಲ್ಲಿ ನವಜಾತ ಶಿಶುವಿನ ಮೃತದೇಹ ಪತ್ತೆಯಾದ ಘಟನೆ ನಡೆದಿದೆ.

ಮಸೀದಿಯ ಮೇನೆಜರ್ ಸುಹೇಲ್ (27) ಅವರು ನೀಡಿದ ದೂರಿನ ಪ್ರಕಾರ, ಮಸೀದಿಗೆ ಸೇರಿದ ಎರಡು ಅಂತಸ್ತಿನ ಕಟ್ಟಡದ ಬಳಿ ಕೆಲಸಗಾರರಿಗಾಗಿ ನಿರ್ಮಿಸಲಾದ ಶೌಚಾಲಯವನ್ನು ಅವರು ಉಪಯೋಗಿಸಲು ಹೋದಾಗ ಈ ಘಟನೆ ಬೆಳಕಿಗೆ ಬಂದಿದೆ. ಶೌಚಾಲಯದ ಒಳಗೆ ನವಜಾತ ಶಿಶುವಿನ ಮೃತದೇಹ ಬಿದ್ದಿರುವುದನ್ನು ಕಂಡು ಅವರು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಸ್ಥಳಕ್ಕೆ ಧಾವಿಸಿದ ಮಲ್ಪೆ ಪೊಲೀಸರು ಪರಿಶೀಲನೆ ನಡೆಸಿದ್ದು, ಶೌಚಾಲಯದ ಗೋಡೆಗಳ ಮೇಲೆ ರಕ್ತದ ಕಲೆಗಳು ಕಂಡುಬಂದಿವೆ.

ಈ ಸಂಬಂಧ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಪೊಲೀಸರು ಪ್ರಕರಣದ ಕುರಿತು ತನಿಖೆ ಮುಂದುವರಿಸಿದ್ದಾರೆ. ಮಗುವಿನ ಪೋಷಕರು ಯಾರು ಮತ್ತು ಈ ಕೃತ್ಯಕ್ಕೆ ಕಾರಣರಾದವರು ಯಾರು ಎಂಬ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Related Articles

Back to top button