ರಾಜಕೀಯ
ಉಡುಪಿ ಮಳೆ ಹಾನಿ ಪರಿಹಾರಕ್ಕೆ ಕ್ರಮ: ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ್

Views: 1
ಉಡುಪಿ ಜಿಲ್ಲೆಯಾದ್ಯಂತ ವಿಪರೀತವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಹಾನಿ ಸಂಭವಿಸಿದ್ದು, ಈ ನಿಟ್ಟಿನಲ್ಲಿ ಉಡುಪಿಗೆ ಭೇಟಿ ನೀಡಲಿದ್ದೇನೆ ಎಂದು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು.
ಮಳೆ ಹಾನಿ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು ಶುಕ್ರವಾರ ಉಡುಪಿಗೆ ಭೇಟಿ ನೀಡಿ ಎಲ್ಲಾ ಅಧಿಕಾರಿಗಳೊಂದಿಗೆ ಚರ್ಚೆ ಮಾಡಿ, ಕೂಡಲೇ ಸ್ಪಂದಿಸಲಿದ್ದೇನೆ ಎಂದರು.
ಮಳೆಹಾನಿಯಿಂದಾಗಿ ಪ್ರಾಣ ಕಳೆದುಕೊಂಡವರಿಗೆ 24 ಗಂಟೆ ಒಳಗೆ ಸೂಕ್ತ ಪರಿಹಾರ ಕೊಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದರು.