ಜನಮನ

ಉಡುಪಿ ವಿದ್ಯಾರ್ಥಿನಿಯ ವಿಡಿಯೋ ಚಿತ್ರೀಕರಣ ಪ್ರಕರಣ: ಯುವ ಮೋರ್ಚಾ ಸದಸ್ಯರಿಂದ       ಗ್ರಹ ಸಚಿವರ ಮನೆಗೆ ಮುತ್ತಿಗೆ

Views: 0

ಉಡುಪಿಯ ಪ್ಯಾರಾ ಮೆಡಿಕಲ್ ಕಾಲೇಜಿನ ಶೌಚಾಲಯದಲ್ಲಿ ವಿದ್ಯಾರ್ಥಿನಿಯೊಬ್ಬರ ವಿಡಿಯೋವನ್ನು ಆಕೆಯ ಸಹ ವಿದ್ಯಾರ್ಥಿನಿಯರು ಶೂಟ್  ಮಾಡಿರುವ ಪ್ರಕರಣ ಈಗ ವಿವಿಧ ರೂಪ ಪಡೆದುಕೊಳ್ಳುತ್ತಿದೆ.

ಅಂತರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಖುಷ್ಬೂ ಸುಂದರ್ ಅವರು ನಿನ್ನೆ ನಗರಕ್ಕೆ ಆಗಮಿಸಿ ಈ ಘಟನೆ ಬಗ್ಗೆ ಗಂಭೀರವಾಗಿ ಪರಿಗಣಿಸಿದ್ದಾರೆ..

ಗ್ರಹ ಸಚಿವ ಡಾ.ಜಿ‌ ಪರಮೇಶ್ವರ್ ಅವರು ನೀಡಿರುವ ಹೇಳಿಕೆ ಖಂಡಿಸಿ, ಇಂದು ಬೆಂಗಳೂರು ಸದಾಶಿವ ನಗರದಲ್ಲಿರುವ ಅವರ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ.

ಇದೇ ಸಂದರ್ಭದಲ್ಲಿ ಯುವ ಮೋರ್ಚಾ ಕಾರ್ಯಕರ್ತರು ಪ್ರತಿಭಟನೆ ನಡೆಸಿ, ತಪ್ಪಿತಸ್ಥರನ್ನು ಬಂಧಿಸಿ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.

ಡಾ.ಜಿ.ಪರಮೇಶ್ವರ ವಿರುದ್ಧ ಧಿಕ್ಕಾರ ಕೂಗಿದ್ದಾರೆ. ಗೃಹ ಸಚಿವ ಅವರ ಮನೆಗೆ ಮುತ್ತಿಗೆ ಹಾಕಿದ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

Related Articles

Back to top button
error: Content is protected !!