ಇತರೆ

ಉಡುಪಿ: ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಮಾರಾಟ ವೇಳೆ ಆರೋಪಿ ಬಂಧನ

Views: 134

ಕನ್ನಡ ಕರಾವಳಿ ಸುದ್ದಿ: ಸಾರ್ವಜನಿಕ ಸ್ಥಳದಲ್ಲಿ ಮಾದಕವಸ್ತು ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ವ್ಯಕ್ತಿಯನ್ನು ಉಡುಪಿಯಲ್ಲಿ ಬಂಧಿಸಲಾಗಿದೆ.

ಬಿಹಾರ ಮೂಲದ ಬ್ರಹ್ಮದೇವ್ ಯಾದವ್ (37) ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ.

ಉಡುಪಿ ತಾಲೂಕು ಶಿವಳ್ಳಿ ಗ್ರಾಮದ ಮಣಿಪಾಲ ರೈಲ್ವೆ ನಿಲ್ದಾಣದ ಸಾರ್ವಜನಿಕ ಸ್ಥಳದಲ್ಲಿ ನಿಷೇಧಿತ ಮಾದಕ ವಸ್ತು ಗಾಂಜಾವನ್ನು ಮಾರಾಟ ಮಾಡಲು ಮುಂದಾಗಿದ್ದನು. ಈ ವೇಳೆ ಸೆನ್ ಠಾಣಾ ಪೊಲೀಸರು ಆತನನ್ನು ಬಂಧಿಸಿದ್ದಾರೆ.

ಈತನಿಂದ 690 ಗ್ರಾಂ ಗಾಂಜಾ, ಮೊಬೈಲ್ ಪೋನ್-1, ನಗದು 680 ರೂಪಾಯಿ ಮತ್ತು ಇತರೇ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

Related Articles

Back to top button