ಸಾಮಾಜಿಕ

ಉಡುಪಿ: ಸಾಲಿಗ್ರಾಮ ಗಂಡ- ಹೆಂಡತಿ ಜಗಳ, ಕ್ಷುಲ್ಲಕ ಕಾರಣಕ್ಕೆ ಪತ್ನಿಯ ಭೀಕರ ಕೊಲೆ; ಪತಿಯ ಬಂಧನ

Views: 714

ಉಡುಪಿ: ಸಾಲಿಗ್ರಾಮ ಗಂಡ- ಹೆಂಡತಿ ಜಗಳದ ಕ್ಷುಲ್ಲಕ ಕಾರಣಕ್ಕೆ ಪತ್ನಿಯ ಭೀಕರ ಕೊಲೆ; ಪತಿಯ ಬಂಧನ

ಕೋಟ: ಕ್ಷುಲ್ಲಕ ಕಾರಣಕ್ಕಾಗಿ ಪತ್ನಿಯನ್ನು ಪತಿ ಕೊಲೆಗೈದ ಘಟನೆ ಬ್ರಹ್ಮಾವರ ತಾಲೂಕಿನ ಸಾಲಿಗ್ರಾಮ ಕಾರ್ಕಡ ಅಂಗನವಾಡಿ ಕೇಂದ್ರದ ಸಮೀಪ ಬಾಡಿಗೆ ಮನೆಯಲ್ಲಿ ನಡೆದಿರುವ ಬಗ್ಗೆ ಶುಕ್ರವಾರ ವರದಿಯಾಗಿದೆ.

ಕೊಲೆಗೀಡಾದವರನ್ನು ಬೀದರ್ ದೊಣಗಪುರ ಮೂಲದ ಜಯಶ್ರೀ(31) ಎಂದು ಗುರುತಿಸಲಾಗಿದೆ. ಕೊಲೆ ಆರೋಪಿ ಆಕೆಯ ಪತಿ ಕಿರಣ್ ಉಪಾಧ್ಯ ಗುಂಡ್ಮಿ(44) ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಕೊಲೆ ಕೃತ್ಯ ಶುಕ್ರವಾರ ಮುಂಜಾನೆ ಬೆಳಕಿಗೆ ಬಂದಿದೆ.

ಪತ್ನಿ ಜಯಶ್ರೀಗೆ ವಿಪರೀತ ಮೊಬೈಲ್ ನಲ್ಲಿ ರೀಲ್ಸ್ ಮಾಡುವ ಚಟ ಇದ್ದು ಅಲ್ಲದೆ ಆನ್ಲೈನ್ ವ್ಯವಹಾರದಲ್ಲಿ ನಿರತರಾಗಿದ್ದು ಇದರಿಂದಾಗಿ ಪ್ರತೀ ದಿನ ಗಂಡ ಹೆಂಡತಿ ನಡುವೆ ಜಗಳವಾಗುತ್ತಿತ್ತು. ಅದೇ ರೀತಿ ಗುರುವಾರ ರಾತ್ರಿ ಶುರುವಾಗಿದ್ದ ಜಗಳ ಶುಕ್ರವಾರ ಮುಂಜಾನೆ ತನಕ ನಡೆದು ಪತಿ ಕತ್ತಿಯಿಂದ ಪತ್ನಿಗೆ ಹಲ್ಲೆ ನಡೆಸಿದ್ದಾಗ ಪತ್ನಿ ಜಯಶ್ರೀ ತಲೆಗೆ ಗಂಭೀರ ಗಾಯಗೊಂಡು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ

ಕಿರಣ್ ಕಳೆದ ಎರಡು ವರ್ಷಗಳಿಂದ ನರಸಿಂಹ ದೇವಸ್ಥಾನದಲ್ಲಿ ಅಡುಗೆ ಕೆಲಸ ಮಾಡಿಕೊಂಡಿದ್ದನು ಎಂದು ತಿಳಿದುಬಂದಿದೆ. ಕೋಟ ಪೊಲೀಸರು ತನಿಖೆ ನಡೆಸುತ್ತಿದ್ದು, ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದಾರೆ ಕೊಲೆಯ  ಬಗ್ಗೆ ತನಿಖೆಯಿಂದ ಇನ್ನಷ್ಟು ಮಾಹಿತಿ ಬರಬೇಕಾಗಿದೆ.

 

Related Articles

Back to top button