ರಾಜಕೀಯ

ಉಪಮುಖ್ಯಮಂತ್ರಿ ಡಿಕೆಶಿ- ಬಿಜೆಪಿಯ ಎಚ್.ವಿಶ್ವನಾಥ್ ಮಹತ್ವದ ಮಾತುಕತೆ

Views: 65

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮುಡಾ ಪ್ರಕರಣದ ಕಿಡಿ ಹೊತ್ತಿಸಿದ ಬಿಜೆಪಿಯ ವಿಧಾನಪರಿಷತ್ ಸದಸ್ಯ ಎಚ್.ವಿಶ್ವನಾಥ್ ಹಾಗೂ ಶಾಸಕ ಎಸ್.ಆರ್.ವಿಶ್ವನಾಥ್ ಇಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿರುವುದು ಕುತೂಹಲ ಕೆರಳಿಸಿದೆ.

ಎಸ್.ಆರ್.ವಿಶ್ವನಾಥ್ ಅವರು ತಮ್ಮ ಕ್ಷೇತ್ರಕ್ಕೆ ಸಂಬಂಧಪಟ್ಟಂತೆ ಉಪಮುಖ್ಯಮಂತ್ರಿಯನ್ನು ಭೇಟಿ ಮಾಡಿದ್ದಾಗಿ ಹೇಳಿಕೊಂಡಿದ್ದಾರೆ. ಅತ್ತ ಎಚ್.ವಿಶ್ವನಾಥ್ ಸುದ್ದಿಗಾರರೊಂದಿಗೆ ಮಾತನಾಡಿ,ಈ ಹಿಂದೆ ಮುಡಾದಲ್ಲಿ ನಿವೇಶನ ಹಂಚಿಕೆಗೆ ಸಂಬಂಧಪಟ್ಟಂತೆ ಕಳೆದ ಎರಡು ವರ್ಷಗಳ ಹಿಂದಿನ ಪ್ರಕರಣವನ್ನು ಎಚ್.ವಿಶ್ವನಾಥ್ ಕೆದಕಿದರು. ಲೋಕಸಭೆ ಚುನಾವಣೆಗೂ ಮುನ್ನ ಎಚ್.ವಿಶ್ವನಾಥ್ ಬಿಜೆಪಿ ಮುಖಂಡರ ವಿರುದ್ಧವೇ ಕೆಂಡಕಾರಿ ಕಾಂಗ್ರೆಸ್ ನಾಯಕರ ಪರವಾಗಿ ಮಾತನಾಡಿದ್ದರು. ಆ ಸಂದರ್ಭದಲ್ಲಿ ವಿಶ್ವನಾಥ್ ಮರಳಿ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎಂಬ ವದಂತಿಗಳು ಹರಡಿದ್ದವು.

Related Articles

Back to top button