ರಾಜಕೀಯ

ಉಪಮುಖ್ಯಮಂತ್ರಿ ಡಿಕೆಶಿ ವಿರುದ್ಧ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು

Views: 45

ಬೆಂಗಳೂರು, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಚುನಾವಣಾ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಾರೆ ಎಂದು ಬಿಜೆಪಿ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.

ಸಚಿವರು ಮತ್ತು ಶಾಸಕರ ಕಚೇರಿಗಳಲ್ಲಿ ರಾಜಕೀಯ ಚಟುವಟಿಕೆಗಳು ಮುಂದುವರೆದಿವೆ. ಇದು ಚುನಾವಣಾ ಸಮಿತಿಯ ಉಲ್ಲಂಘನೆಯಾಗಿದೆ ಎಂದು ಬಿಜೆಪಿ ಮುಖಂಡರ ನಿಯೋಗ ರಾಜ್ಯ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು ನೀಡಿದೆ.

ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ವಿಧಾನಸೌಧವನ್ನು ಕಾಂಗ್ರೆಸ್ ಕಚೇರಿ ಎಂದು ಭಾವಿಸಿರುವಂತೆ ಕಾಣುತ್ತದೆ. ನಿನ್ನೆ ಮಾರ್ಚ್ 30 ರಂದು ವಿಧಾನಸೌಧದ ಕಚೇರಿಯಲ್ಲಿ ನಜ್ಮಾ ನಜೀರ್ ಚಿಕ್ಕನೆರಳೆಯನ್ನು ಪಕ್ಷಕ್ಕೆ ಸೇರ್ಪಡೆ ಕಾರ್ಯಕ್ರಮ ಹಮ್ಮಿಕೊಂಡು ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ. ಜವಾಬ್ದಾರಿಯುತ ಸ್ಥಾನದಲ್ಲಿರುವ ಅವರು ಸರ್ಕಾರಿ ಕಚೇರಿಯನ್ನು ಪಕ್ಷದ ಚಟುವಟಿಕೆಗಳಿಗೆ ಬಳಕೆ ಮಾಡಿರುವುದು ಸರಿಯಲ್ಲ ಎಂದು ಬಿಜೆಪಿ ದೂರಿನಲ್ಲಿ ಹೇಳಿದೆ.

ರಾಜ್ಯದ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್ ಅವರ  ಈ ಕಾರ್ಯಕ್ರಮ ನಡೆದರೂ ಯಾವುದೇ ಕ್ರಮ ಜರುಗಿಸಿಲ್ಲ. ಅವರು ತೋರಿಸುವ ನಿಷ್ಕ್ರೀಯತೆ ಆತಂಕಕಾರಿಯಾಗಿದೆ ಎಂದು ಬಿಜೆಪಿ ದೂರಿನಲ್ಲಿ ಹೇಳಿ, ಸಚಿವರು ಹಾಗೂ ಶಾಸಕರುಗಳಿಗೆ ವಿಧಾನಸೌಧದ ಕಚೇರಿಯಲ್ಲಿ ರಾಜಕೀಯ ಚಟುವಟಿಕೆಗಳನ್ನು ನಡೆಸದಂತೆ ನಿರ್ಬಂಧ ಹೇರಬೇಕು. ಸಂಬಂಧಪಟ್ಟ ಅಧಿಕಾರಿಗಳಿಗೆ ಈ ಕುರಿತು ಸೂಕ್ತ ನಿರ್ದೇಶನ ನೀಡುವಂತೆ ಕೋರಿದೆ.

ಬಿಜೆಪಿ ಶಾಸಕರಾದ ಎಸ್. ಸುರೇಶ್‌ಕುಮಾರ್, ಟಿ.ಕೆ. ರಾಮಮೂರ್ತಿ, ಮುಖ್ತ ವಕ್ತಾರ ಅಶ್ವತ್ಥ್‌ನಾರಾಯಣ, ರಾಜ್ಯ ವಕ್ತಾರ ಎಸ್. ಪ್ರಕಾಶ್ ಸೇರಿದಂತೆ ಹಲವು ಮುಖಂಡರು ಈ ನಿಯೋಗದಲ್ಲಿದ್ದರು.

Related Articles

Back to top button